ಕೋಲಾರ(ವಿಶ್ವಕನ್ನಡಿಗ ನ್ಯೂಸ್):- ಜಿಲ್ಲೆಯ ಕೋಲಾರ ಮತ್ತು ಮಾಲೂರು ತಾಲ್ಲೂಕುಗಳ ವ್ಯಾಪ್ತಿಗೆ ಬರುವ ಮಹೇಂದ್ರ ಏರೊಸ್ಟ್ರೇಚರ್ ಪ್ರೈ.ಲಿ. , ನೀಲ್ ಮೆಟಲ್ ಪ್ರಾಡಕ್ಟ್ ಲಿ . , ಮತ್ತು ಕ್ಲೋರೈಡ್ ಮೆಟಲ್ ಲಿ . , ಕೈಗಾರಿಕೆಗಳಲ್ಲಿ ವಾಣಿಜ್ಯ ಬಳಕೆ , ಕುಡಿಯುವ ನೀರು ಹಾಗೂ ಇತರೆ ನೀರಿನ ಬಳಕೆಗಾಗಿ ಕೊಳವೆ ಬಾವಿಗಳ ಕೊರೆಯಲು ಜಿಲ್ಲಾ ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ನೀಡುವ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ | ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ನಗರಸಭೆ ಹಾಗೂ ಪುರಸಭೆಗಳಿಂದ ಈಗಾಗಲೇ ಸಲ್ಲಿಸಿರುವ ಪ್ರಾಸ್ತವನೆಗಳಿಗೆ ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ನೀಡುವ ಬಗ್ಗೆ , 2020-21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಡಾ || ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ , ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ , ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮಗಳಿಂದ ಕೊಳವೆಬಾವಿಗಳನ್ನು ಕೊರೆಯಲು ಸಲ್ಲಿಸಿರುವ ಪ್ರಾಸ್ತವನೆಗಳಿಗೆ ಜಿಲ್ಲಾ ಅಂಡೆರ್ಜಲ ಪ್ರಾಧಿಕಾರದಿಂದ ಅನುಮತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಗಳಲ್ಲಿ ಖಾಸಗಿಯವರ ಸ್ವಂತ ಸ್ಥಳಗಳಲ್ಲಿ ಗೃಹಬಳಕೆ ಮತ್ತು ಕುಡಿಯುವ ನೀರಿಗಾಗಿ ಕೊಳವೆಬಾವಿ ಕೊರೆಯಲು ಅನುಮತಿ ನೀಡುವ ಬಗ್ಗೆ ಹಾಗೂ ಕೋಲಾರ , ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕುಡಿಯುವ ನೀರಿಗಾಗಿ ಹೊಸಕೊಳವೆಬಾವಿಗಳನ್ನು ಕೊರೆಯಲು ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ನೀಡುವ ಬಗ್ಗೆ ಚರ್ಚಿಸಲಾಯಿತು.
ಕೆಸಿ ವ್ಯಾಲಿ ವ್ಯಾಪ್ತಿಯಲ್ಲಿ ಈಗಾಗಲೇ ಅಧ್ಯಯನ ಕೊಳವೆಬಾವಿಗಳನ್ನು ಕೊರೆಯಲು ಜಲಬಿಂದುಗಳನ್ನು ಗುರುತಿಸಿದ್ದು , ಅಟಲ್ಭೂಜಲ್ ಯೋಜನೆಯಡಿ ಜಿಲ್ಲೆಯಲ್ಲಿ 39 ಗ್ರಾಮ ಪಂಚಾಯತಿಗಳಲ್ಲಿ ಅಧ್ಯಯನ ಕೊಳವೆಬಾವಿಗಳನ್ನು ಕೊರೆದು ಪೂರ್ಣಗೊಳಿಸಲಾಗಿದೆ.
37 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕುಡಿಯುವ ನೀರಿಗಾಗಿ ಕೊರೆದು ಕಡಿಮೆ ಇಳುವರಿ ಇರುವ ಕೊಳವೆಬಾವಿಗಳನ್ನು ಅಧ್ಯಯನ ಕೊಳವೆಬಾವಿಗಳಾಗಿ ಆಯ್ಕೆ ಮಾಡಲಾಗುವುದು ಎಂದು ಹಿರಿಯ ಭೂವಿಜ್ಞಾನಿಗಳು ತಿಳಿಸಿದರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಹಾಗೂ ನಗರಸಭೆ , ಪುರಸಭೆ ನಿಗಮ ಮಂಡಳಿಗಳಿಂದ ಕೊರೆದಿರುವ ಕೊಳವೆಬಾವಿಗಳನ್ನು ಜಿಲ್ಲಾ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.
ನೊಂದಣಿ ಮಾಡದೆ ಇಲಾಖೆಗಳು ದಿನದೊಳಗಾಗಿ ಎಲ್ಲಾ ಕೊಳವೆಬಾವಿಗಳನ್ನು ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.15 ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಸಂಜೀವಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.