ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್) : ಪಟ್ಟಣದ ಕೆಪಿಟಿಸಿಎಲ್ ಕಚೇರಿ ಎದುರು ಸೋಮವಾರ ಕೆಪಿಟಿಸಿಎಲ್ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು . ಯಾವುದೇ ಕಾರಣಕ್ಕೂ ವಿದ್ಯುತ್ ಸರಬರಾಜು ಖಾಸಗೀಕರನ ಮಾಡಬಾರದು ಎಂದು ಪ್ರತಿಭಟನ ನಿರತ ನೌಕರರು ಆಗ್ರಹಪಡಿಸಿದರು. ಕೇಂದ್ರ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಆ ೧೦ ರವರೆಗೆ ಎಲ್ಲ ನೌಕರರೂ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ , ಸಹಾಯಕ ಎಂಜಿನಿಯರ್ಗಳಾದ ನಂಜುಂಡೇಶ್ವರ , ದೇವರಾಜ್ , ವೇಣುಗೋಪಾಲ್ , ಚಂದು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.