ಕೋಲಾರ (ವಿಶ್ವಕನ್ನಡಿಗ ನ್ಯೂಸ್):– ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 15 ರಂದು ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಚರಿಸುವ ಸ್ವಾತಂತ್ರ ದಿನಾಚರಣೆಯನ್ನು ಎಲ್ಲಾ ಇಲಾಖೆಗಳು ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಹಾಗೂ ರಾಷ್ಟ್ರೀಯ ಹಬ್ಬಗಳಲ್ಲಿ ಕನ್ನಡ ಸಂಸ್ಕೃತಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್ . ಸೆಲ್ವಮಣಿ ಅವರು ಹೇಳಿದರು.
ಇಂದು ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಎಲ್ಲಾ ಇಲಾಖೆಗಳ ಕಛೇರಿಗಳಲ್ಲಿ ಬೆಳ್ಳಿಗೆ 8,00 ಗಂಟೆಗೆ ಧ್ವಜಾರೋಹಣ ಮಾಡಿ ನಂತರ ಬೆಳಿಗ್ಗೆ 8.55 ಕ್ಕೆ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ಧ್ವಜಾರೋಹಣದಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕು ಸೂಚಿಸಿದರು. ಎಂದು ಎಲ್ಲಾ ಕಛೇರಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ಎರಡು ದಿನ ದೀಪಾಂಲಕಾರ ಮಾಡಿಸಬೇಕು , ಕಛೇರಿಗಳನ್ನು ಸ್ವಚ್ಛಗೊಳಿಸಬೇಕು. ಯಾವುದೇ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ರಾಷ್ಟ್ರೀಯ ಹಬ್ಬಕ್ಕೆ ಗೈರುಹಾಜರಾದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಕ್ರೀಡಾಂಗಣದಲ್ಲಿ ವೇದಿಕೆಯನ್ನು ಸುಸಜ್ಜಿತವಾಗಿ ಸಿದ್ಧಗೊಳಿಸಲು ಪಿ.ಡಬ್ಲ್ಯೂಡಿ ಅಧಿಕಾರಿಗಳಿಗೆ ಸೂಚಿಸಲಾಯಿತು ಹಾಗೂ ಫೆರೆಡ್ ತಂಡಗಳಿಗೆ ಬೆಳಿಗ್ಗಿನ ಉಪಹಾರ ವ್ಯವಸ್ಥೆ ಕಲ್ಪಿಸಲು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿಲಾಯಿತು . ಜಿಲ್ಲೆಯಲ್ಲಿ ಕೊವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವಂತಹ ಕೋವಿಡ್ ವಾರಿಯರ್ಸ್ಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಹಾಗೂ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು. ಕ್ರೀಡಾಂಗಣದಲ್ಲಿ ಪೊಲೀಸ್ , ಹೋಂಮ್ ಗಾರ್ಡ , ಸೇವಾ ದಳ , ಎನ್ . ಸಿ . ಸಿ ವಿದ್ಯಾರ್ಥಿಗಳು ಹಾಗೂ ಸೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಫೆರೆಡ್ ನಡೆಸಲಾಗುವುದು ಈ ಬಾರಿ ಕೋವಿಡ್ ಇರುವುದರಿಂದ ಸಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಅವರು ತಿಳಿಸಿದರು.
ಕೋವಿಡ್ 3 ನೇ ಅಲೆಯು ಸಂಭವಿಸುವ ಆತಂಕವಿರುವುದರಿಂದ ಸರ್ಕಾರದಿಂದ ನೂತನ ಕೋವಿಡ್ ಮಾರ್ಗ ಸೂಚಿ ಆದೇಶ ಹೊರಡಿಸಿದರೆ ಸರ್ಕಾರದ ನಿಯಮಗಳನ್ನು ಪಾಲಿಸಿ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅವರು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು , ಅಪರ ಜಿಲ್ಲಾಧಿಕಾರಿಗಳಾದ ಡಾ.ಸ್ನೇಹಾ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.