ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಇಲ್ಲಿನ ಬ್ರಹ್ಮಾವರ ಬಳಿಯ ಹೇರೂರು ಸೇತುವೆಯ ಮೇಲೆ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಲಾರಿಗೆ, ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದ್ದೂ ಕಾರಿನಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ರಸ್ತೆಯ ಗುಂಡಿಗ ತಪ್ಪಿಸಲು ಪ್ರಯತ್ನಿಸಿದ ತರುವಾಯ ವಾಹನವು ನಿಯಂತ್ರಣ ಕಳೆದುಕೊಂಡು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆಯಿತು . ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು.ಬ್ರಹ್ಮಾವರ ಪೊಲೀಸರು ಪ್ರಕರಣವನ್ನು ದಾಖಲಿಸಿ ಕೊಂಡಿದ್ದಾರೆ .
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.