ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್): ನನ್ನ ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕoತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದರು . ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ ಕೊಡುತ್ತೇನೆ ಎಂದು ಅವರು ಹೇಳಿದರು. ತುಳು ಭಾಷೆಯನ್ನ 8ನೇ ಪರಿಚ್ಚೇದನ ಹಾಗೂ ಕನ್ನಡಕ್ಕೆ ಶಾಸ್ತ್ರೀ ಸಂಗೀತ ಸೇರಿಸಲು ಪ್ರಯತ್ನ ಮಾಡುತ್ತೇನೆ. ಅತೀ ಶೀಘ್ರದಲ್ಲೇ ಸಮಸ್ಯೆಯನ್ನ ಬಗೆ ಹರಿಸುವ ಕೆಲಸ ಮಾಡುತ್ತೇನೆ. ಎಂದರು . ಈ ಸಂದರ್ಭ ದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ್ ಶೆಟ್ಟಿ, ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.