ಶ್ರೀನಿವಾಸಪುರ (ವಿಶ್ವ ಕನ್ನಡಿಗ ನ್ಯೂಸ್):- ಹತ್ತು ದಿನಗಳೊಳಗಾಗಿ ಕೊವಿಡ್ ವಾರ್ ರೂಂನ್ನು ನಿರ್ಮಿಸಿ ಮಕ್ಕಳಲ್ಲಿ ಯಾವುದೇ ಚಿಕಿತ್ಸೆ ತೊಂದರೆ ಯಾಗದಂತೆ ಚಿಕಿತ್ಸೆ ನೀಡಬೇಕು . ಆಸ್ಪತ್ರೆಯಲ್ಲಿ ಹಾಸಿಗೆಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ , ಯೋಜನೆ ಮತ್ತು ಸ್ಯಾಂಖಿಕ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ಸೂಚಿಸಿದರು.
ಇಂದು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಮಾತನಾಡಿ , 3 ನೇ ಅಲೆಯಿಂದ ಸಂಕಷ್ಟಕ್ಕಿಡಾಗದೆ ಐಸಿಯು ಹಾಸಿಗೆಗಳು , ವೆಂಟಿಲೇಟರ್ , ಪೈಪ್ ಲೈನ್ ಆಕ್ಸಿಜನ್ ಮತ್ತಿತರ ಸೌಲಭ್ಯಗಳ ಬಗ್ಗೆ ಅವರು ಪರಿಶೀಲನೆ ಮಾಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆ ಹಾಗೂ ಕೋವಿಡ್ ವಾರ್ ರೂಂನಲ್ಲಿರುವ ಕೊರತೆ ಮತ್ತು ಆಸ್ಪತ್ರೆಗಳಲ್ಲಿರುವ ಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಕೋವಿಡ್ ಸಂಭಾವ್ಯ 3 ನೇ ಅಲೆ ಬರುವ ಮುನ್ನವೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು , ಮಕ್ಕಳ ಆರೋಗ್ಯವನ್ನು ಕಾಪಾಡುವ ಬಗ್ಗೆ ವಿಶೇಷ ಗಮನ ಹರಿಸಬೇಕು.
ಮಕ್ಕಳಿಗೆ ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆ ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಅವರು ತಿಳಿಸಿದರು. ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆಸ್ಪತ್ರೆಗಳಲ್ಲಿ 3 ನೇ ಅಲೆಯನ್ನು ನಿಯಂತ್ರಣ ಮಾಡಲು ಬೇಕಾದ ಎಲ್ಲಾ ಸಲಕರಣೆಗಳನ್ನು ಒದಗಿಸುವುದು.
ಕೋವಿಡ್ 3 ನೇ ಅಲೆಯಲ್ಲಿ ತಜ್ಞರ ವರದಿ ಪ್ರಕಾರ ಮಕ್ಕಳ ಮೇಲೆ ಎಷ್ಟು ಪರಿಣಾಮ ಬೀರುತ್ತದೆ. ಆ ಮಕ್ಕಳ ಮೇಲೆ ಪರಿಣಾಮ ಬೀರದಿರುವುದಕ್ಕೆ ನೀವು ಏನು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರಾ. ಎಷ್ಟು ಮಕ್ಕಳಿಗೆ ಬೆಡ್ಗಳ ವ್ಯವಸ್ಥೆ ಇದೆ ಎಂದು ಆರೋಗ್ಯ ಅಧಿಕಾರಿಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು , ಆಸ್ಪತ್ರೆಯಲ್ಲಿ ಸಂಪೂರ್ಣವಾಗಿ ಆಸಕ್ತಿ ವಹಿಸಿ ಕೆಲಸ ನಿರ್ವಹಿಸಬೇಕು . ನಾವು ಮಾಡುವ ಕೆಲಸ ಜನರ ಜೀವನವನ್ನು ಕೆಲಸವಾಗಬೇಕು ತಿಳಿಸಿದರು.
ಆಸ್ಪತ್ರೆಯ ಸಿಬ್ಬಂದಿಗಳ ಮತ್ತು ಔಷಧಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು . ಈಗ ಇರುವ 100 ಹಾಸಿಗಳ ಜೊತೆಗೆ 25 ಹಾಸಿಗೆಳ ಬೆಡ್ಗಳನ್ನು ಹೆಚ್ಚಿಸಲಾಗುವುದು . ಮಕ್ಕಳಿಗಾಗಿ 5 ವೆಂಟಿಲೇಟರ್ , ವಯಸ್ಕರ 5 ವೆಂಟಿಲೇಟರ್ಗಳ ಪೈಪ್ ಲೈನ್ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಮೇಶ್ ಕುಮಾರ್ , ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ ಶ್ರೀನಿವಾಸ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ ವೇಣುಗೋಪಾಲ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.