ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ನೆರೆಯ ಕೇರಳ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಭಿಸಿರುವುದನ್ನು ಗಮನಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಪರಿಗಣಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ (26 ಐಎಂಎಲ್ ಹಾಗೂ 5 ಶೇಂದಿ) ಮದ್ಯದಂಗಡಿಗಳನ್ನು ಆಗಸ್ಟ್ 1ರಿಂದ 15ರವರೆಗೆ ಮುಚ್ಚಲು ಈಗಾಗಲೇ ಆದೇಶಿಸಲಾಗಿರುತ್ತದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತ 1073 ರ ಕಲಂ 11 (3) ಹಾಗೂ ಕರ್ನಾಟಕಅಬಕಾರಿ (ಸನ್ನದುಗಳ ಸಾಮಾನ್ಯ ಪರತ್ತುಗಳು) ಕಾಯ್ದೆ 1965 ನಿಯಮ 21(1) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಗಾಗಲೇ ಹೊರಡಿಸಿರುವ ಆದೇಶವನ್ನು ಆಗಸ್ಟ್ 16 ರಿಂದ 30ರ ವರೆಗೆ ಮುಂದುವರಿಸಲಾಗಿದ್ದು, ಆ.30ರ ವರೆಗೆ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.