ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಸಾಮಾಜಿಕ ಜಾಲ ತಾಣವಾದ ಫೇಸ್ಬುಕ್ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪದಡಿಯಲ್ಲಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ತಾಲೂಕಿನ ಕೋಟೇಶ್ವರ ನಿವಾಸಿ ಹರೀಶ್ ಬಂಗೇರ ಒಂದು ವರ್ಷ ಏಳು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ.ಆಗಸ್ಟ್ 17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ದೋಹಾ ಮೂಲಕ ಆಗಸ್ಟ್ 18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ್ದರು.ಕೋಟೇಶ್ವರದ ಗೋಪಾಡಿ ಗ್ರಾಮದ ಹರೀಶ್ ಬಂಗೇರ ಅವರ ಹೆಸರಲ್ಲಿ ಫೇಸ್ ಬುಕ್ನಲ್ಲಿ ನಕಲಿ ಖಾತೆ ತೆರೆದು, ಸೌದಿ ಅರೇಬಿಯಾ ದೊರೆ ವಿರುದ್ಧ ಫೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮಾಡಿದವರು ಬಂಗೇರ ಎಂದೇ ಭಾವಿಸಿದ್ದ ಸೌದಿ ಪೊಲೀಸರು ಬಂಗೇರ ಅವರನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.