ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಹುಳದೇನಹಳ್ಳಿ ಗ್ರಾಮ ಪಂಚಾಯಿತಿ, ವೈದೇಹಿ ಆಸ್ಪತ್ರೆ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಹೇಮಮಾಲಿನಿ ನಾರಾಯಣಸ್ವಾಮಿ ರವರು ಮಾತನಾಡುತ್ತಾ “ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ನಾನು ಕೂಡ ಗ್ರಾಮೀಣ ಹಳ್ಳಿ ಹಿನ್ನೆಲೆಯಿಂದ ಬಂದಿದ್ದೇನೆ. ಬಡತನದ ಪರಿಚಯವೂ ನನಗೆ ಇದ್ದು ಒಂದು ಉನ್ನತ ಸ್ಥಾನದ ಹೊಣೆ ಹೊಂದಿದ ಮೇಲೆ ಬಡ ಜನರ ಸೇವೆಯನ್ನು ಅವರ ಋಣವನ್ನು ಈ ರೀತಿಯ ಆರೋಗ್ಯ ಶಿಬಿರಗಳ ಮೂಲಕವೇ ತೀರಿಸಲು ಸಾಧ್ಯ ಎಂಬುದನ್ನು ಅರಿತಿದದೇನೆ” ಎಂದರು.
ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ಮುನಿರಾಜ್ ಮಾತನಾಡಿ “ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇತ್ತಿಚಿಗೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಹೆಚ್ಚು ಮಂದಿ ನರಳುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ಸರ್ವಸದಸ್ಯರು ತೀರ್ಮಾನಿಸಿ ರೋಗಿಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ” ಎಂದರು.
ವೈದೇಹಿ ಆಸ್ಪತ್ರೆ, ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಅನೀಲ್ ಕುಮಾರ್ ರವರು ಮಾತನಾಡಿ “ಬಡವರ್ಗದ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದ್ದು ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು” ಎಂದರು.
ಆರೋಗ್ಯ ಶಿಬಿರದಲ್ಲಿ ಸುತ್ತಮುತ್ತಲಿನ ಅನೇಕ ಊರಿನ ಗ್ರಾಮಸ್ಥರು ಬಂದು ಚಿಕಿತ್ಸೆ ಪಡೆಯುತ್ತಿದ್ದರು ಹಾಗೇ ಕನ್ನಡಕಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿತ್ತು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸೇವೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಹೇಮಾಮಾಲಿನಿ ನಾರಾಯಣಸ್ವಾಮಿ, ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀ ಮುರಳಿ, ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಾಮಕೃಷ್ಣಪ್ಪ, ರಾಮಪ್ಪ, ಮುನಿರಾಜ್, ಮುಖಂಡರಾದ ಶ್ರೀನಾಥ್, ಹುಳಿದೇನಹಳ್ಳಿ ನಟರಾಜ್, ವೆಂಕಟಸ್ವಾಮಿ, ದ್ವಾರಕನಾಥ್, ಸತೀಶ್, ತೋರಹಳ್ಳಿ ರಾಮಸ್ವಾಮಿ, ಶ್ರೀಧರ್, ಪೊಲೀಸ್ ಇಲಾಖೆಯ ರಾಮಕೃಷ್ಣಪ್ಪ, ವೈದೇಹಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.