ಶ್ರೀನಿವಾಸಪುರ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದ ಎಲ್ಲಾ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಡಿಸೆಂಬರ್ ಅಂತ್ಯದೊಳಗೆ 2 ಡೋಸ್ ಕರೋನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ || ಕೆ . ಸುಧಾಕರ್ ಅವರು ತಿಳಿಸಿದರು. ಇಂದು ಮುದವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಕರೋನಾ ಲಸಿಕೆ ಮತ್ತು ಪ್ರತಿ ಬುಧವಾರ ಲಸಿಕಾ ಉತ್ಸವದ ಮೂಲಕ 10 ಲಕ್ಷ ಕರೋನಾ ಲಸಿಕೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಪ್ರಧಾನಮಂತ್ರಿಗಳು ಕರೋನಾ ಲಸಿಕೆಗಾಗಿ 35 ಸಾವಿರ ಕೋಟಿ ಮೀಸಲಿಟ್ಟು ರಾಜ್ಯಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡುತ್ತಿದ್ದಾರೆ. ಲಸಿಕೆ ಮಾತ್ರ ಕರೋನಾದಿಂದ ರಕ್ಷಿಸುವ ಶಕ್ತಿ ಹೊಂದಿದೆ. ಎರಡು ಡೋಸ್ ಕರೋನಾ ಲಸಿಕೆ ಪಡೆದರೆ ಕೋವಿಡ್ ನಿಂದ ಸುರಕ್ಷಿತ ಎಂಬುದು ಜನರಿಗೆ ಮನವರಿಕೆಯಾಗಿದೆ. ಲಸಿಕೆಯ ಬಗ್ಗೆ ಮುಗ್ಧ ಜನರಿಗೆ ಅರಿವು ಮೂಡಿಸಿ ಎಲ್ಲರೂ ಲಸಿಕೆ ಪಡೆಯಲು ಪ್ರೇರೇಪಿಸಬೇಕು ಎಂದು ಅವರು ತಿಳಿಸಿದರು.
೨೫೦ ಪ್ರಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ದರ್ಜೆಗೆ ಏರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು. ಶ್ರೀನಿವಾಸಪುರ ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು , ಮೇಲ್ದರ್ಜೆಗೆ ಏರಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ ಮಾತ್ರವಲ್ಲದೆ , ಅಗತ್ಯ ಬಿದ್ದಾಗ ಶಸ್ತ್ರ ಚಿಕಿತ್ಸೆ ನಡೆಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಎಲ್ಲಾ ಆಸ್ಪತ್ರೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ . ಕಳೆದ 12 ತಿಂಗಳುಗಳಲ್ಲಿ 45 ಸಾವಿರ ಆಮ್ಲಜನಕ ಸಹಿತ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. 5 ತಿಂಗಳುಗಳಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಲಾಗಿದೆ . ಮುಂದಿನ ದಿನಗಳಲ್ಲಿ ಸುಮಾರು 7 ರಿಂದ 8 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು . ಐ.ಸಿ.ಯು ಬೆಡ್ಗಳು ಮತ್ತು 3 ವೈದ್ಯರು ದಿನದ 24 ಗಂಟೆ ಕೆಲಸವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮಾಡುತ್ತಾರೆ ಎಂದು ತಿಳಿಸಿದರು.
ಜಿಲ್ಲೆಗೆ ಎತ್ತಿನಹೊಳೆ ಯೋಜನೆ ಮತ್ತು ಕೃಷ್ಣ ನದಿ ನೀರಿಂದ ಶೀಘ್ರದಲ್ಲಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಬದ್ಧವಾಗಿದೆ. ಪ್ರತಿಯೊಂದು ಕೆರೆ ನೀರಿನಿಂದ ತುಂಬಿದರೆ ರೈತರ ಬದಕು ಹಸನಾಗುತ್ತದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ, ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಅವರನ್ನು ಗೆಲ್ಲಿಸಿ ಎಂದು ಕ್ಷೇತ್ರದ ಮತದಾರರಿಗೆ ಕರೆ ಕೊಡುವುದರ ಮೂಲಕ ಬಿಜೆಪಿ ಮುಖಂಡರು ಹುಬ್ಬೇರಿಸುವಂತೆ ಮಾಡಿದರು.
ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ತೋಟಗಾರಿಕೆ , ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಮುನಿರತ್ನ ಅವರು ಮಾತನಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಗ್ರಾಮೀಣ ಭಾಗದಲ್ಲಿ ಹೆಚ್ಚು ಸ್ಥಾಪನೆಯಾಗಬೇಕು. ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು ಪ್ರತಿಯೊಬ್ಬರು ಕರೋನಾ ಲಸಿಕೆ ಪಡೆದು ಕರೋನಾ ನಿಯಂತ್ರಣಕ್ಕೆ ಸಹಕರಿಸಬೇಕು.
ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದು ಕೊರತೆ ಕಚೇರಿಗಳನ್ನು ಸ್ಥಾಪಿಸಿ ಜನರ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಜಿಲ್ಲೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಜಿಲ್ಲೆಯನ್ನು ಸರ್ವಾಗೀಣ ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ತಿಳಿಸಿದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಮಾತನಾಡಿ ಇಡೀ ಪ್ರಪಂಚಕ್ಕೆ ಕರೋನಾ ವ್ಯಾಪಿಸಿರುವ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಉತ್ತಮ ಕಾರ್ಯ ನಿರ್ವಹಿಸಿ ಕರೋನಾವನ್ನು ನಿಯಂತ್ರಿಸಲಾಗಿದೆ. ದೇಶದಲ್ಲಿ 60 ಕೋಟಿಗೂ ಹೆಚ್ಚಿನ ಜನರಿಗೆ ಕರೋನಾ ಲಸಿಕೆ ನೀಡಲಾಗಿದೆ. ಕೋಲಾರ ಜಿಲ್ಲೆಯು ರಾಜ್ಯದಲ್ಲಿ ಅತೀ ಹೆಚ್ಚು ಲಸಿಕೆ ನೀಡಿರುವ ಜಿಲ್ಲೆಯಾಗಿದೆ . ಕರೋನಾ ಲಸಿಕೆ ಪಡೆಯದೆ ಇರುವವರು ಶೀಘ್ರದಲ್ಲಿ ಲಸಿಕೆ ಪಡೆದು ಕರೋನಾ ಮುಕ್ತವಾಗಿಸಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ . ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ. ನಾಗರಾಜ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಾರದ ಅಪ್ಪಾಸಾಹೇಬ್ ನರಟ್ಟಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ . ಎಂ.ಜಗದೀಶ್ , ತಾಲ್ಲೂಕು ವೈದ್ಯಾಧಿಕಾರಿ ಡಾ . ಎಂ.ಸಿ.ವಿಜಯ , ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ , ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ , ರಾಜ್ಯ ಜನತಾದಳದ ಪ್ರಧಾನ ಕಾರ್ಯದರ್ಶಿ ಬಿ.ಸಿ.ಶಿವಾರೆಡ್ಡಿ , ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್.ವೇಣುಗೋಪಾಲ್n ಮುಖಂಡರಾದ ತಪಲ್ಲಿ ಆರ್.ನಾರಾಯಣಸ್ವಾಮಿ , ಜಿ.ಕೆ.ನಾಗರಾಜ್ , ಕುಂದಿಟವಾರಿಪಲ್ಲಿಬಿ.ವಿ.ಶಿವಾರೆಡ್ಡಿ , ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್.ವೇಣುಗೋಪಾಲ್ , ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ , ಜಿ.ಕೆ.ನಾಗರಾಜ್ , ಕುಂದಿಟಿವಾರಿಪಲ್ಲಿ ಶಿವಾರೆಡ್ಡಿ , ಎಂ.ಮಾರುತಿರೆಡ್ಡಿ , ಆನಂದ್ , ಮನು , ಬಕ್ಷಿಸಾಬ್ ಇದ್ದರು.
ಉದ್ಘಾಟನೆ : ತಾಲ್ಲೂಕು ಪ್ರವಾಸ ಕೈಗೊಂಡ ಆರೋಗ್ಯ ಸಚಿವ ಡಾ . ಕೆ.ಸುಧಾಕರ್ ಮುದವಾಡಿ ಹಾಗೂ ಲಕ್ಷ್ಮೀಸಾಗರ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದಗಳನ್ನು ಉದ್ಘಾಟಿಸಿದರು , ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆರ್ಟಿಪಿಸಿಆರ್ ಲ್ಯಾಬ್ ಹಾಗೂ ಆಮ್ಲಜನಕ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.