ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇದೇ ಸೆ.5ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಪ್ಪಿನಮೊಗರು ಪ್ರೆಸ್ಟೀಜ್ ಸ್ಕೂಲ್ನಲ್ಲಿ ಶಿಕ್ಷಕರ ದಿನಾಚರಣೆ-2021 ಹಮ್ಮಿಕೊಳ್ಳಲಾಗಿದೆ.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡುವರು.
ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ದಿ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯರಾದ ನಳೀನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ. ವೈ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್. ಯು, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡಬಿದ್ರೆ ಶಾಸಕ ಉಮಾನಾಥ್.ಎ. ಕೋಟ್ಯಾನ್, ಕರ್ನಾಟಕ ವಿಧಾನ ಪರಿಷತ್ನ ಶಾಸಕರಾದ ಕೆ. ಪ್ರತಾಪಚಂದ್ರ ಶೆಟ್ಟಿ, ಬಿ. ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್. ಕೆ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಜಗದೀಶ್ ಪೈ, ಕರ್ನಾಟಕ ಅರೆ ಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ವೀಣಾ ಮಂಗಳ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹ ನಿರ್ದೇಶಕರು ಹಾಗೂ ಪ್ರಾಂಶುಪಾಲ ಡಾ. ಸಿಪ್ರಿಯನ್ ಮೊಂತೆರೋ ಹಾಗೂ ಇತರರು ಭಾಗವಹಿಸುವರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.