(www.vknews.com) ; ದಿನಾಂಕ 6-9-2021 ಸೋಮವಾರ, ಪ್ರತೀ ವರ್ಷ ಸಪ್ಟೆಂಬರ್ ತಿಂಗಳ ಮೊದಲ ವಾರ ಅಂಗನವಾಡಿ ವ್ಯಾಪ್ತಿಯಲ್ಲಿ ನಡೆಯುವ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಈ ಬಾರಿ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 9 ಅಂಗನವಾಡಿ ಕೇಂದ್ರಗಳು ಒಟ್ಟಾಗಿ ಪಂಚಾಯತ್ ಸಂಜೀವಿನಿ ಸಭಾಂಗಣದಲ್ಲಿ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಗ್ರಾಮದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ಬಹಳ ವಿಶೇಷವಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಫೌಝಿಯ ಬಾನು ಸಭಿಕರನ್ನುದ್ದೇಶಿಸಿ ,ಸರಕಾರಿ ಪ್ರಾಯೋಜಿತ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ತಮ್ಮ ಕುಟುಂಬ ಭಾಂಧವರಿಗೂ ಕೂಡ ಸರಕಾರಿ ಸೌಲಭ್ಯದ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.ಕಾರ್ಯಕ್ರಮದಲ್ಲಿ ಹಾಜರಿದ್ದ ಅಂಗನವಾಡಿ ಮೇಲ್ವಿಚಾರಕಿ ಪೌಷ್ಟಿಕ ಆಹಾರದ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.
ಮಹಿಳೆಯರಿಗೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಿದ್ದರಲ್ಲದೆ ವಿಜೇತರಿಗೆ ಬಹುಮಾನವನ್ನು ಪಂಚಾಯತ್ ಅಧ್ಯಕ್ಷೆ ,ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿತರಿಸಿದರು.ಕಾರ್ಯಕ್ರಮಕ್ಕೆ ಮಹಿಳೆಯರು ವಿವಿಧ ಪೌಷ್ಟಿಕಯುಕ್ತ ಆಹಾರ ಪದಾರ್ಥಗಳನ್ನು ತಂದಿದ್ದು ಕಾರ್ಯಕ್ರಮದ ಕೊನೆಗೆ ಸಭಿಕರೆಲ್ಲರಿಗೂ ಅದನ್ನೇ ನೀಡಲಾಯಿತು.ಕಾರ್ಯಕ್ರಮವನ್ನು ಪಂಚಾಯತ್ ಸಭಾಂಗಣದಲ್ಲಿಆಯೋಜಿಸಲು ಅನುವು ಮಾಡಿಕೊಟ್ಟ ಪಂಚಾಯತ್ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ,ನೆರೆದ ಸಭಿಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರೆಲ್ಲರಿಗೂ ಅಂಗನವಾಡಿ ಮೇಲ್ವಿಚಾರಕಿ ಧನ್ಯವಾದ ಸಮರ್ಪಿಸಿದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.