ಚಿಕ್ಕಬಳ್ಳಾಪುರ ಚಿಂತಾಮಣಿ (www.vknews.com): ಜೀಪ್ ಹಾಗೂ ಸಿಮೆಂಟ್ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನ ಸಾವು ಜೀಪ್ ಹಾಗೂ ಸಿಮೆಂಟ್ ಲಾರಿ ಮುಖಾಮುಖಿ ಡಿಕ್ಕಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದು 8 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಮರಿನಾಯಕನಹಳ್ಳಿ ಬಳಿ ಅಪಘಾತ ವಾಗಿದೆ.ಮೃತರೆಲ್ಲರೂ ಕೊಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರು ಎನ್ನಲಾಗಿದೆಅಪಘಾತಕ್ಕೀಡಾದ ಜೀಪ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಕಡೆಯಿಂದ ಚಿಂತಾಮಣಿ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಸೇರಿದಂತೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.