ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) :ಹೆಣ್ಣು ಮಕ್ಕಳ ಮೇಲೆ ನಡೆದಿರುವ ಹಲ್ಲೆಯಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಲು ಹಿಂಜರಿಯುತ್ತಾರೆ. ಆದ್ದರಿಂದ ಯಾವುದೇ ಹೆಣ್ಣು ಮಕ್ಕಳು ನಿರ್ಭಯವಾಗಿ ಶಾಲಾ ಕಾಲೇಜಿಗೆ ಬರುವಂತಹ ವಾತಾವರಣ ಕಲ್ಪಿಸಿ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ನೆಹರು ಚ ಓಲೇಕಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಶ್ರೀನಿವಾಸಪುರ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರ ಯೋಗಕ್ಷೇಮ ವಿಚಾರಿಸಿ ಅವರಿಗೆ ಧೈರ್ಯ ತುಂಬಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಹಲ್ಲೆಯಿಂದ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆ ಕಾಲೇಜುಗಳಿಗೆ ಕಳುಹಿಸಲು ಭಯ ಪಡುವಂತಹ ಸಂದರ್ಭ ನಿರ್ಮಾಣವಾಗಿದೆ.
ಇದು ಅಹಿತಕಾರಕ ಘಟನೆ . ಇಂತಹ ಘಟನೆಗಳು ಮರುಕಳಿಸಬಾರದು , ಈ ಘಟನೆಯನ್ನು ಗಂಭೀರವಾಗಿ ಪರಿಗಣಿಲಾಗಿದೆ ಎಂದು ಅವರು ತಿಳಿಸಿದರು. ಹಲ್ಲೆಗೊಳಗಾದ 5 ಜನ ಸಂತ್ರಸ್ಥರಿಗೆ ತಲಾ 50 ಸಾವಿರ ಪರಿಹಾರ ಧನವನ್ನು ಜಿಲ್ಲಾಡಳಿತ ವತಿಯಿಂದ ನೀಡಲಾಗಿದೆ . ಉಳಿದ 3 ಜನ ಸಂತ್ರಸ್ಥರಿಗೆ ಶೀಘ್ರದಲ್ಲಿ ಪರಿಹಾರ ಧನ ನೀಡಲಾಗುವುದು.
ಈ ಘಟನೆಯಲ್ಲಿ 11 ಜನರ ಮೇಲೆ ಪ್ರಕರಣ ದಾಖಲಾಗಿದ್ದು 7 ಜನರನ್ನು ಅರೆಸ್ಟ್ ಮಾಡಲಾಗಿದೆ . ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಹಾಗೂ ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯರಾದ ವೆಂಕಟೇಶ ದೊಡೇರಿ , ಕಾರ್ಯದರ್ಶಿಗಳಾದ ಜಯಪಾಲಯ್ಯ , ಜಿಲ್ಲಾಧಿಕಾರಿಗಳಾದ ಡಾ | ಆರ್ , ಸೆಲ್ವಮಣಿ , ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕ ಕಿಶೋರ್ ಬಾಬು , ತಶೀಲ್ದಾರ್ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.