ಕಾರ್ಕಳ,(ವಿಶ್ವ ಕನ್ನಡಿಗ ನ್ಯೂಸ್ ): ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತಾಲೂಕಿನ ಹಿರ್ಗಾನ ಗ್ರಾಮದ ಮೂಜೂರು ಬಳಿ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ಮಂಗಳೂರು ಕಡೆಗೆ ಕೋಳಿಗಳನ್ನು ಹೇರಿಕೊಂಡು ಕಾರ್ಕಳ ಮಾರ್ಗವಾಗಿ ಸಾಗುತ್ತಿದ್ದಾಗ ಹಿರ್ಗಾನ ಗ್ರಾಮದ ಮೂರುರು ಅಂಚೆಕಚೇರಿಯ ಬಳಿ ನಡು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಘಟನೆಯಿಂದ ಲಾರಿ ಚಾಲಕ ಗಾಯಗೊಂಡಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿದ್ದೂ ಜೊತೆಗೆ ಮಿಕ್ಕುಳಿದ ಕೋಳಿಗಳು ಸ್ಥಳೀಯರ ಪಾಲಾಗಿದೆ ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.