ಶಿಡ್ಲಘಟ್ಟ.(ವಿಶ್ವಕನ್ನಡಿಗ ನ್ಯೂಸ್): ಬಾಲಿವುಡ್ನ ಖ್ಯಾತ ನಟ ಅಮೀತಾಬ್ ಬಚನ್ ಅವರ ಕಾರನ್ನು ಖರೀದಿಸಿ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಕೋಲಾರ ಜಿಲ್ಲೆಯ ಕೆಜಿಎಫ್ನ ಯೂಸುಫ್ ಶರೀಫ್ (ಕೆ.ಜಿ.ಎಫ್ ಬಾಬು) ಅವರನ್ನು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಆಹ್ವಾನ ನೀಡಲಾಗಿದೆ.
ಶುಕ್ರವಾರದಂದು ಕೆಜಿಎಫ್ ಬಾಬು ಶಿಡ್ಲಘಟ್ಟಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಿಂದ ಕ್ಷೇತ್ರದ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ ಕೋಲಾರ ಮತ್ತು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಕೆಲ ಮುಖಂಡರು ಒತ್ತಾಯಿಸುತ್ತಿರುವುದರಿಂದ ಈಗಾಗಲೇ ಅವರು ಎರಡು ಕ್ಷೇತ್ರಗಳಲ್ಲಿ ಜನರ ಅಭಿಪ್ರಾಯವನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎನ್ನಲಾಗಿದೆ.
ಕೋಲಾರ ಮತ್ತು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲು ಕೆಜಿಎಫ್ ಬಾಬು ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ ಇದೇ ನಿಟ್ಟಿನಲ್ಲಿ ಕೇವಲ ಅಲ್ಪಸಂಖ್ಯಾತರು ಮಾತ್ರವಲ್ಲದೆ ಸಮಾಜದಲ್ಲಿರುವ ಎಲ್ಲಾ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮತ್ತು ಸಮಾಜಸೇವಾ ಕಾರ್ಯಗಳನ್ನು ನಡೆಸಲು ಯೋಜನೆಗಳನ್ನು ರೂಪಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಎಬಿಡಿ ಗ್ರೂಪಿನ ಅಧ್ಯಕ್ಷ ರಾಜೀವ್ಗೌಡ ವಿವಿಧ ರೀತಿಯ ಸಮಾಜಸೇವಾ ಕಾರ್ಯಗಳ ಮೂಲಕ ಜನರ ಪ್ರೀತಿ ವಿಶ್ವಾಸವನ್ನು ಗಳಿಸುವ ನಿಟ್ಟಿನಲ್ಲಿ ಪ್ರಯತ್ನವನ್ನು ಮುಂದುವರೆಸಿದ್ದಾರೆ ಮತ್ತೊಂದಡೆ ಶಿಡ್ಲಘಟ್ಟ ನಗರಸಭೆಯ ಕೆಲ ಸದಸ್ಯರು ಕೆಜಿಎಫ್ ಬಾಬು ಅವರನ್ನು ಆಹ್ವಾನಿಸಿ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವಂತೆ ಮನವಿ ಮಾಡಿದ್ದು ಆದರೇ ಕೆ.ಜಿ.ಎಫ್ ಬಾಬು ಅವರು ಶಿಡ್ಲಘಟ್ಟ ಅಥವಾ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ತಮ್ಮ ನಿಲುವು ವ್ಯಕ್ತಪಡಿಸಿಲ್ಲ ಆದರೂ ಸಹ ಅಂದುಕೊಂಡಂತೆ ಆದರೇ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮೊತ್ತೊಬ್ಬ ಸಮಾಜಸೇವಕನ ಎಂಟ್ರೀ ಆಗಲಿದೆ.
“ಕೋಲಾರ ಮತ್ತು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿರುವುದು ನಿಜ ಆದರೇ ನಾನು ಇದುವರೆಗೆ ಯಾವುದೇ ರೀತಿಯ ನಿರ್ಧಾರ ಮಾಡಿಲ್ಲ ಪ್ರಸ್ತುತ ಸಮಾಜಸೇವಾ ಕಾರ್ಯವನ್ನು ನಡೆಸುತ್ತೇನೆ ವಿಶೇಷವಾಗಿ ಬಡ ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತೇನೆ ಚುನಾವಣೆಗೆ ಸ್ಪರ್ಧಿಸುವ ವಿಚಾರವನ್ನು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇನೆ”
ಯೂಸುಫ್ ಶರೀಫ್ ಕೆ.ಜಿ.ಎಫ್ ಬಾಬು ಸಮಾಜಸೇವಕರು
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.