ಜೆದ್ದಾ(www.vknews.in):ಸೌದಿ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಶನಿವಾರ ಸಂಜೆ ಭಾರತಕ್ಕೆ ಬಂದಿಳಿದಿದ್ದಾರೆ. ಮೂರು ದಿನಗಳ ಅಫ್ಘಾನಿಸ್ತಾನದ ಭೇಟಿಯ ನಂತರ ಫೈಸಲ್ ಬಿನ್ ಫರ್ಹಾನ್ ಭಾರತಕ್ಕೆ ಭೇಟಿ ನೀಡಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭಾನುವಾರ ಭೇಟಿ ಮಾಡಿದ ರಾಜಕುಮಾರ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಮಾತುಕತೆ ನಡೆಸಲಿದ್ದಾರೆ.
ವರದಿಗಳ ಪ್ರಕಾರ ಆಫ್ಘನ್ ಸಮಸ್ಯೆಗಳ ಹೊರತಾಗಿ, ಭಾರತ-ಸೌದಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆಯೂ ಚರ್ಚಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಸಂಜಯ್ ಭಟ್ಟಾಚಾರ್ಯ ಅವರು, ಇಬ್ಬರು ವಿದೇಶಾಂಗ ಸಚಿವರು ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರ ವಿಮಾನಗಳ ಪುನರಾರಂಭದ ಬಗ್ಗೆ ಚರ್ಚಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜಕುಮಾರ ಸೋಮವಾರ ಭಾರತದಿಂದ ನ್ಯೂಯಾರ್ಕ್ಗೆ ತೆರಳಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.