ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಮಾಲೂರು ವಿಧಾನಸಭಾಕ್ಷೇತ್ರದ ಮಾಲೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಆಯ್ಕೆ ಮಾಡಲಾಗಿದೆ.
ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಎಂ.ಜಿ.ಮಧುಸೂದನ್ ರವರನ್ನು ಹಾಗೂ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಧ್ಯಕ್ಷರನ್ನಾಗಿ ವಿಜಯನರಸಿಂಹ ರವರನ್ನು ಆಯ್ಕೆ ಮಾಡಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಕೆಲಸಮಾಡಬೇಕಾಗಿ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರು ತಿಳಿಸಿದ್ದಾರೆ.
ಆಯ್ಕೆಯಾದ ಎಂ.ಜಿ.ಮಧುಸೂದನ್ ಹಾಗೂ ವಿಜಯನರಸಿಂಹ ರವರು ಮಾಲೂರು ತಾಲ್ಲೂಕಿನ ಶಾಸಕರಾದ ಕೆ.ವೈ.ನಂಜೇಗೌಡ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಹಾಗೂ ಸಮಸ್ತ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.