(www.vknews.com) : ತೀವ್ರ ಉಸಿರಾಟದ ತೊಂದರೆಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ 54 ವರ್ಷದ ಹೊನ್ನಾವರದ ವ್ಯಕ್ತಿಯೊಬ್ಬರಿಗೆ ಆಸ್ಪತ್ರೆಯೊಂದರಲ್ಲಿ ಪರೀಕ್ಷೆ ನಡೆಸಿದಾಗ ರೋಗಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ವೈದ್ಯರು ಎಷ್ಟೇ ಪ್ರಯತ್ನಪಟ್ಟರೂ ರೋಗಿಯ ಆರೋಗ್ಯ ಸುಧಾರಿಸಲೇ ಇಲ್ಲ, ಬದಲಿಗೆ ಅವರ ಸ್ಥಿತಿ ಮತ್ತಷ್ಟು ಚಿಂತಾಜನಕವಾಗುತ್ತಲೇ ಸಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಎಂಸಿ ಆಸ್ಪತ್ರೆಯ ಡಾ. ಹರೂನ್ ಹೆಚ್; ಡಾ.ದತ್ತಾತ್ರಯ ಪ್ರಭು ಹಾಗೂ ತುರ್ತು ಚಿಕಿತ್ಸಾ ತಂಡ ಒಟ್ಟಾಗಿ ರೋಗಿಯ ಆರೋಗ್ಯ ಸುಧಾರಣೆಗೆ ಅಗತ್ಯವಿರುವ ಚಿಕಿತ್ಸೆ ನೀಡಿದ್ದಾರೆ.
ಈ ಕೇಸ್ ಕುರಿತು ಮಾಹಿತಿ ನೀಡಿದ ಡಾ. ಹರೂನ್ ಹೆಚ್ ಅವರು, “ಕೆಎಂಸಿ ಆಸ್ಪತ್ರೆಗೆ ದಾಖಲಾದಾಗ ರೋಗಿಯು ಅತಿ ವೇಗವಾಗಿ ಉಸಿರಾಡುತ್ತಿದ್ದರು. ಹೀಗಾಗಿ ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿತ್ತು. ಇದರೊಂದಿಗೆ ಅವರು ತೀವ್ರ ಸ್ವರೂಪದ ಕೋವಿಡ್ ನ್ಯುಮೋನಿಯಾದಿಂದ ಬಳಲುತ್ತಿದ್ದುದರಿಂದ ಅದಕ್ಕೆ ಸಂಬಂಧಿಸಿದಂತೆಯೂ ಚಿಕಿತ್ಸೆ ನೀಡಲಾಯಿತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಸೈಟೋಕಿನ್ ಸ್ಟಾರ್ಮ್ ಸಮಸ್ಯೆಗೆ ತುತ್ತಾಗುವ ಸಾಧ್ಯತೆಯಿದ್ದು, ವೆಂಟಿಲೇಟರ್ ನೆರವಿನ ಅಗತ್ಯ ಕೂಡ ಇತ್ತು. ನಿರಂತರವಾದ ಚಿಕಿತ್ಸೆ ಮತ್ತು ವಿಶೇಷ ಕಾಳಜಿಯಯಿಂದಾಗಿ ರೋಗಿಯನ್ನು ವೆಂಟಿಲೇಟರ್ ಸಪೋರ್ಟ್ನಿಂದ ಹೊರಗೆ ಕರೆತರಲಾಯಿತು. ಕೋವಿಡ್ನಿಂದಾಗಿ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಅಲ್ಲದೆ, ಆಹಾರ, ನೀರು ನುಂಗಲು ಆಗದೆ ಬಹಳ ಕಷ್ಟ ಅನುಭವಿಸುತ್ತಿದ್ದರು,” ಎಂದು ವಿವರಿಸಿದರು.
ಆಹಾರ, ನೀರು ನುಂಗಲು ಆಗದೆ ಬಹಳ ಕಷ್ಟ ಅನುಭವಿಸುತ್ತಿದ್ದೇನೆ ಎಂದು ರೋಗಿಯು ನಮ್ಮ ಬಳಿ ಹೇಳಿದಾಗ ನರಸ್ನಾಯುವಿನ (ನ್ಯೂರೋಮಸ್ಕ್ಯುಲರ್) ಸಮಸ್ಯೆ ಇರಬಹುದು ಎಂದು ನಾವು ಊಹಿಸಿದೆವು. ಅಲ್ಲದೆ ಅವರು ಕೋವಿಡ್ ಸಂಬಂಧಿ ಮೈಸ್ತೇನಿಯಾ ಗ್ರಾವಿಸ್ನಿಂದ ಕೂಡ ಬಳಲುತ್ತಿದ್ದರು. ಹೀಗಾಗಿ ಮೈಸ್ತೇನಿಯಾ ಗ್ರಾವಿಸ್ ಸಮಸ್ಯೆಗೆ ಚಿಕಿತ್ಸೆ ನೀಡಲು ಆರಂಭಿಸಿದಾಗ ರೋಗಿಯಲ್ಲಿ ಸಾಕಷ್ಟು ಚೇತರಿಕೆ ಲಕ್ಷಣಗಳು ಕಂಡುಬಂದವು. ಅವರಿಗೆ ನೀಡುತ್ತಿದ್ದ ಆಮ್ಲಜನಕದ ಪ್ರಮಾಣವನ್ನು ಕ್ರಮೇಣ ಕಡಿಮೆ ಮಾಡಲಾಯಿತು. ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂತು. “ಕೋವಿಡ್ ಗುಣವಾದ ನಂತರ ಕಾಣಿಸಿಕೊಳ್ಳುವ ಇನ್ಫೆಕ್ಷನ್ (ಸೋಂಕು) ನಿಂದ ಉಂಟಾಗುವ ನರಮಂಡಲ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಈ ರೀತಿಯ ಇನ್ನೂ 2 ಕೇಸ್ಗಳು ಐಸಿಯುನಲ್ಲಿ ಇದ್ದವು. ರೋಗಿಯು ಯಶಸ್ವಿಯಾಗಿ ಡಿಸ್ಚಾರ್ಜ್ ಆಗಿದ್ದು, ಮುಂದಿನ ಕೆಲವು ದಿನಗಳ ಕಾಲ ನಮ್ಮ ನಿರಂತರ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ. ರೋಗಿಯನ್ನು ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಅವರ ಪ್ರಾಣ ರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಮತ್ತು ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಎದುರಾದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರ ಮಹತ್ವ ಎಷ್ಟು ಎಂಬುದನ್ನು ಈ ಪ್ರಕರಣವು ತೋರಿಸಿಕೊಟ್ಟಿದೆ ಎಂದು ನರಶಾಸ್ತ್ರಜ್ಞ ಡಾ. ರೋಹಿತ್ ಪೈ ವಿವರಿಸಿದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.