ಚಂಡೀಗಢ (ವಿಶ್ವ ಕನ್ನಡಿಗ ನ್ಯೂಸ್) : ಪಂಜಾಬ್ ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಪಂಜಾಬ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದ ನವಜೋತ್ ಸಿಂಗ್ ಸಿಧು ಏಕಾಏಕಿ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.
ರಾಜೀನಾಮೆ ಜೊತೆ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರವೊಂದನ್ನೂ ಬರೆದಿದ್ದಾರೆ. ಈ ಪತ್ರದಲ್ಲಿ ನಾನು ಪಂಜಾಬ್ನ ಭವಿಷ್ಯ ಮತ್ತು ಪಂಜಾಬ್ನ ಅಭಿವೃದ್ಧಿ ಅಜೆಂಡಾದೊಂದಿಗೆ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ, ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರಸ್ ಸೇವೆ ಮುಂದುವರೆಸುತ್ತೇನೆ ಎಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.