ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರ ಕಿಡಿಕಾರಿದ್ದು, ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸಿದೆ.
ಮಾಧ್ಯಮದೊಂದಿಗೆ ಮಾತನಾಡಿದ ಶಿವಸೇನಾ ಸಂಸದ ಸಂಜಯ್ ರಾವತ್, ಸಿಆರ್ಪಿಸಿ ಸೆಕ್ಷನ್ 144 ಅನ್ನು ಲಖೀಂಪುರ್ ಖೇರಿಯಲ್ಲಿ ವಿಧಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲಾಗಿದೆ, ರಾಹುಲ್ ಗಾಂಧಿ ಅವರನ್ನು ತಡೆಯಲಾಗಿದೆ. ಅವರು ಯಾವ ಅಪರಾಧ ಮಾಡಿದ್ದಾರೆ? ದೇಶದಲ್ಲಿ ಹೊಸ ಸಂವಿಧಾನವಿದೆಯೇ? ಉತ್ತರ ಪ್ರದೇಶವೇನು ಪಾಕಿಸ್ತಾನದಲ್ಲಿದೆಯೇ, ಅಲ್ಲಿ ಭಾರತೀಯರು ಹೋಗುವುದನ್ನು ಏಕೆ ನಿಲ್ಲಿಸಲಾಗಿದೆ? ಎಂದು ಪ್ರಶ್ನಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.