ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಭಾರತದ ಗ್ರ್ಯಾಂಡ್ ಮುಫ್ತಿ ಮತ್ತು ಜಾಮಿಯಾ ಮರ್ಕಜ್ ಕುಲಪತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರಿಗೆ ಯುಎಇ ಸರ್ಕಾರವು ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.
ಭಾರತ ಮತ್ತು ಇತರೆಡೆಗಳಲ್ಲಿ ಕಾಂತಪುರಂ ಮಾಡಿದ ಸಾಮಾಜಿಕ ಮತ್ತು ದತ್ತಿ ಕಾರ್ಯಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಯುಎಇ ಮತ್ತು ಜಾಮಿಯಾ ಮರ್ಕಜ್ ನಡುವಿನ ಅಂತರರಾಷ್ಟ್ರೀಯ ಸಂಬಂಧ, ಶೈಕ್ಷಣಿಕ ವಿನಿಮಯ ಮತ್ತು ದತ್ತಿ ಚಟುವಟಿಕೆಗಳು ಗೌರವಕ್ಕೆ ಕಾರಣವಾಗಿವೆ.
ಹತ್ತು ವರ್ಷಗಳ ಗೋಲ್ಡನ್ ವೀಸಾವನ್ನು ಯುಎಇ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಪ್ರತಿಭಾವಂತ ವ್ಯಕ್ತಿಗಳಿಗೆ ನೀಡುತ್ತಿದೆ. ಶಿಕ್ಷಣ ಮತ್ತು ದತ್ತಿ ಚಟುವಟಿಕೆಗಳಿಗಾಗಿ ಭಾರತದಿಂದ ಗೋಲ್ಡನ್ ವೀಸಾ ಪಡೆದ ಮೊದಲ ವ್ಯಕ್ತಿ ಕಾಂತಪುರಂ ಉಸ್ತಾದ್ ಆಗಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್, ಯುನೈಟೆಡ್ ಅರಬ್ ಎಮಿರೇಟ್ಸ್ ನ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಮತ್ತು ಅಬುಧಾಬಿಯ ರಾಜಕುಮಾರ ಮತ್ತು ಯುಎಇ ಸಶಸ್ತ್ರ ಪಡೆಗಳ ಉಪ ಕಮಾಂಡರ್ -ಇನ್ -ಚೀಫ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಕಾಂತಪುರಂ ಉಸ್ತಾದ್ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.