ಪ್ರಾಂಶುಪಾಲರ ದ್ವಿಮುಖ ನೀತಿಯಿಂದ ಗೊಂದಲ
ಅದೇ ಕಾಲೇಜಿನ ವಿದ್ಯಾರ್ಥಿಗಳು ಬೇರೆ ವಿದ್ಯಾರ್ಥಿ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಲವು ಫೋಟೋ ವೈರಲ್
ಬೆಳ್ತಂಗಡಿ (www.vknews.com) ; ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹಾಗೂ ಶೈಕ್ಷಣಿಕ ಕ್ಷೇತ್ರದ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯ ವಿರುದ್ಧ ಸದಾ ಮುಂಚೂಣಿಯಲ್ಲಿ ಹೋರಾಟ ಮಾಡುತ್ತಾ ಬಂದಿರುವ ವಿದ್ಯಾರ್ಥಿ ಸಂಘಟನೆಯೊಂದರ ಕಾರ್ಯಚಟುವಟಿಕೆಯಲ್ಲಿ ಗುರುತಿಸಿಕೊಡಿರುವ ಏಕೈಕ ಕಾರಣವಣ್ಣಿಟ್ಟು ಬೆಳ್ತಂಗಡಿ ತಾಲೂಕಿನ ವಾಣಿ ಕಾಲೇಜಿನ ಪ್ರಾಂಶುಪಾಲರು 9 ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳುವಂತಿಲ್ಲ ಎಂದಿರುವ ಪ್ರಾಂಶುಪಾಲರ ನಡೆ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದೆ.
ವಿದ್ಯಾರ್ಥಿ ಸಂಘಟನೆಯನ್ನು ರಾಜಕೀಯ ಪಕ್ಷ ಎಂದು ಬಿಂಬಿಸಿರುವ ಪ್ರಾಂಶುಪಾಲರು ಯಾವುದೇ ವಿಚಾರಣೆ ನಡೆಸದೆ ಕಾನೂನು ಕ್ರಮ ಕೈಗೊಂಡಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಸೃಷ್ಟಿಯಾಗಿದೆ.
ಪ್ರಾಂಶುಪಾಲರ ದ್ವಿಮುಖ ನೀತಿಯ ವಿರುದ್ಧ ಬೀದಿಗಿಳಿದು ಹೋರಾಟಕ್ಕೆ ವೇದಿಕೆ ಸಜ್ಜು
ಯಾರದೋ ಒತ್ತಡಕ್ಕೆ ಬಲಿಯಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಚೆಲ್ಲಾಟವಾಡಿದ ಪ್ರಾಂಶುಪಾಲರ ನಡೆಯ ಬಗ್ಗೆ ಸಾರ್ವಜನಿಕರಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದು, ಅದೇ ಕಾಲೇಜಿನ ಇನ್ನಷ್ಟು ವಿದ್ಯಾರ್ಥಿಗಳು ಬೇರೊಂದು ವಿದ್ಯಾರ್ಥಿ ಸಂಘಟನೆಯ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿ ಭಾಗವಹಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆಕ್ರೋಶ ಹೆಚ್ಚಾಗಿದ್ದು ಕಾನೂನು ಎಲ್ಲರಿಗೂ ಒಂದೇ ಆಗಬೇಕೆಲ್ಲವೇ ಎಂದು ಪ್ರಶ್ನಿಸತೊಡಗಿದ್ದು ದ್ವಿಮುಖ ನೀತಿಯ ವಿರುದ್ಧ ಹೋರಾಟಕ್ಕೆ ವೇದಿಕೆ ಸಜ್ಜಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.