ಕೊಡಗು (www.vknews.com) : 11 ತಿಂಗಳ ಹಿಂದೆ ವಿವಾಹವಾಗಿದ್ದ ಯುವತಿಯೊಬ್ಬಳು ಪತಿ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ತಾಲೂಕಿನ ಆಂಗೇರಿ ಗ್ರಾಮದಲ್ಲಿ ನಡೆದಿದೆ. ಇಪ್ಪತ್ತು ವರ್ಷ ವಯಸ್ಸಿನ ಅಮೀರಾ ಆತ್ಮಹತ್ಯೆಗೆ ಶರಣಾದ ಯುವತಿ.
11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿದ್ದ ಅಮೀರಾಗೆ ವಿವಾಹದ ಬಳಿಕ ವರದಕ್ಷಿಣೆ ಕೊಡುವಂತೆ ಪತಿ ಹಾಗು ಮನೆಯವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ನೇಣುಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.