ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ಖ್ಯಾತ ಮಲಯಾಳಂ ಚಲನಚಿತ್ರ ನಟ ನೆಡುಮುಡಿ ವೇಣು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯ್ಯಾಸಾಗಿತ್ತು. ಅವರು ಹೊಟ್ಟೆ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.
ರಂಗಭೂಮಿ ಕಲಾವಿದರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಅವರು, 1978 ರಲ್ಲಿ ಜಿ ಅರವಿಂದನ್ ಅವರ “ತಂಬು” ಚಿತ್ರದ ಮೂಲಕ ಮಲಯಾಳಂ ಚಲನಚಿತ್ರ ಜಗತ್ತನ್ನು ಪ್ರವೇಶಿಸಿದರು. ಅವರು ತನ್ನ 40 ವರ್ಷಗಳ ಸುದೀರ್ಘ ಚಲನಚಿತ್ರ ವೃತ್ತಿಜೀವನದಲ್ಲಿ ಮಲಯಾಳಂ ಚಲನಚಿತ್ರಗಳಲ್ಲಿ ಅನೇಕ ಬಹುಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. 500 ಚಲನಚಿತ್ರಗಳಲ್ಲಿ ನಟಿಸಿದ್ದ ಇವರಿಗೆ 3 ರಾಷ್ಟ್ರೀಯ ಪ್ರಶಸ್ತಿಗಳು ಒಲಿದಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.