ಮಂಗಳೂರು (www.vknews.com) : ಕರಾವಳಿ ಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ದೇರೆಬೈಲ್ ಸಮೀಪದ ಲ್ಯಾಂಡ್ ಲಿಂಕ್ಸ್ ಒಳ ರಸ್ತೆ ಕುಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೂರು ತಿಂಗಳ ಹಿಂದೆ ಇಲ್ಲಿ ಸಣ್ಣ ಗುಂಡಿಯೊಂದು ಕಾಣಿಸಿದ್ದು, ತಕ್ಷಣ ಸ್ಥಳೀಯರು ಜನಪ್ರತಿನಿಧಿಗಳ, ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಅದರಂತೆ ಮೇಯರ್ ಪ್ರೇಮಾನಂದ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ದುರಸ್ತಿ ಪಡಿಸದ ಕಾರಣ ರಸ್ತೆಯಲ್ಲಿ ದೊಡ್ಡ ಗುಂಡಿ ಬಿದ್ದಿದೆ. ಆದರೆ ಇದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.