ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕೆಪಿಸಿಸಿ ವಕ್ತಾರರಾದ ವಿ.ಎಸ್. ಉಗ್ರಪ್ಪ ಮತ್ತು ಮಾಧ್ಯಮ ಸಂಯೋಜಕ ಎಂ.ಎ. ಸಲೀಂ ನಡುವಿನ ಗುಟ್ಟುಮಾತು, ರಾಜ್ಯದ ಮೂಲೆಮೂಲೆಯಲ್ಲಿ ಸದ್ದು ಮಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಇದೆಲ್ಲಾ ಸಿದ್ದರಾಮಯ್ಯನವರ ತಂತ್ರಗಾರಿಕೆ. “ಕಾಂಗ್ರೆಸ್ ರಾಜ್ಯಾಧ್ಯಕ್ಷ @DKShivakumar ಬಗ್ಗೆ ಅವರ ಪಕ್ಷದವರೇ ಹೇಳಿರುವ ಮಾತುಗಳನ್ನು ರಾಜ್ಯದ ಜನ ಕೇಳುತ್ತಿದ್ದಾರೆ. ಡಿಕೆಶಿ ಮೇಲೆ ಇಡಿ, ಸಿಬಿಐ ದಾಳಿಯಾದಾಗ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದ ಮುಖಂಡರು ಸಾಕ್ಷ್ಯ ನೀಡಿದ್ದಾರೆ.
ಇದೊಂದು ಡಿಕೆಶಿಯನ್ನು ಮುಗಿಸಲು ಕಾಂಗ್ರೆಸ್ನಲ್ಲಿ ಮಾಡಲಾಗುತ್ತಿರುವ ವ್ಯವಸ್ಥಿತ ಷಡ್ಯಂತ್ರದ ಭಾಗ. ಡಿ. ಕೆ. ಶಿವಕುಮಾರ್ ಪ್ರಭಾವ ಕಡಿಮೆ ಮಾಡಲು ಮತ್ತು ಕುಗ್ಗಿಸಲು ಸಿದ್ದರಾಮಯ್ಯ ಮಾಡಿರೋ ತಂತ್ರಗಾರಿಕೆ ಇರಬಹುದು. ಸಿದ್ದರಾಮಯ್ಯ, ಉಗ್ರಪ್ಪ ಹಾಗೂ ಸಲೀಂ ಮೂಲಕ ಈ ಹೇಳಿಕೆ ಮಾಡಿಸಿದ್ದಾರೆ. ಸತ್ಯಾಸತ್ಯತೆ ಬಯಲಾಗಲು ತನಿಖೆ ಆಗಲಿ, ಆಗ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಳ್ತಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.