ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಕುರಿತು ಲಘುವಾಗಿ ಮತ್ತು ಬೇಜವಾಬ್ದಾರಿಯಿಂದ ಮಾತನಾಡಿದ ಕಾರಣ ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟಿತ ಆಗಿರುವ ಎಂ.ಎ. ಸಲೀಂ ಡಿ.ಕೆ. ಶಿವಕುಮಾರ್ ಅವರಿಗೆ ಕೈಮುಗಿದು ಕ್ಷಮೆ ಕೋರಿದ್ದಾರೆ.
ಕೆಪಿಸಿಸಿ ಮಾಧ್ಯಮ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಲೀಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ. ರೆಹಮಾನ್ ಖಾನ್ ಬುಧವಾರ ಆದೇಶ ಹೊರಡಿಸಿದ್ದರು.
ಶಿವಕುಮಾರ್ ಅವರು ನನಗೆ ರಾಜಕೀಯವಾಗಿ ಗಾಡ್ಫಾದರ್. ಅವರೇ ನನಗೆ ಅವಕಾಶಗಳನ್ನು ನೀಡಿದ್ದರು. ಅವರ ಬಗ್ಗೆ ಮಾತನಾಡಬಾರದಿತ್ತು. ಅಚಾತುರ್ಯದಿಂದ ಇಂತಹ ಘಟನೆ ನಡೆದಿದೆ. ನನ್ನಿಂದಲೇ ದೊಡ್ಡ ತಪ್ಪಾಗಿದೆ. ಅವರು ಯಾವುದೇ ಶಿಕ್ಷೆ ನೀಡಿದರೂ ಅನುಭವಿಸಲು ಸಿದ್ಧ ಇದ್ದೇನೆ. ಈ ರೀತಿ ಆಗಿರುವುದಕ್ಕೆ ಬಹಳ ನೊಂದಿದ್ದೇನೆ ಎಂದು ಅವರು ಕ್ಷಮೆ ಕೋರಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.