ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಪೊಲೀಸ್ಗಿರಿ ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಕ್ರಿಯೆಗೆ ಸಹಜವಾಗಿಯೇ ಪ್ರತಿಕ್ರಿಯೆ ಇರುತ್ತದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದರು.
ಇದಕ್ಕೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ ಬೊಮ್ಮಾಯಿ ಅವರು, “ಟಿಪ್ಪು ಸುಲ್ತಾನ ತನ್ನ ಆಳ್ವಿಕೆಯಲ್ಲಿ ಮಾಡಿದಂತೆ ನೀವು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಕಾರ್ಯಕರ್ತರನ್ನು ಸಾಯಿಸುವ ಮೂಲಕ ಹಿಂದೂ ವಿರೋಧಿಗಳ ಆದರ್ಶಪ್ರಾಯರಾಗಿದ್ದಿರಿ. ನಾನು ನಿಮ್ಮಿಂದ ಆಡಳಿತ ಅಥವಾ ಪೊಲೀಸಿಂಗ್ ಕಲಿಯಬೇಕಿಲ್ಲ. ನಿಮ್ಮ ಸರ್ಕಾರದ ಅಡಿಯಲ್ಲಿ ಯಾವುದೇ ರಕ್ಷಣೆ ಇಲ್ಲದೆ ಕುಳಿತಿದ್ದ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಿಸಲು ಸಮರ್ಥ ಪೊಲೀಸ್ ಪಡೆ ನಮ್ಮ ಬಳಿ ಇದೆ’ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.