ಢಾಕಾ (ವಿಶ್ವ ಕನ್ನಡಿಗ ನ್ಯೂಸ್) : ಬಾಂಗ್ಲಾದೇಶದ ಕಮಿಲಾದಲ್ಲಿ ಹಿಂದು ದೇವಾಲಯಗಳ ಮೇಲೆ ನಡೆದ ದಾಳಿ ಮತ್ತು ದುರ್ಗಾ ಪೂಜೆಯ ಆಚರಣೆಗಳ ವೇಳೆ ನಾಲ್ವರ ಹತ್ಯೆಯಲ್ಲಿ ಭಾಗಿಯಾದವರು ಯಾವ ಧರ್ಮಕ್ಕೆ ಸೇರಿದವರು ಎಂಬುದು ಮುಖ್ಯವಲ್ಲ, ಅವರನ್ನು ಬೇಟೆಯಾಡಿ ಶಿಕ್ಷಿಸಲಾಗುವುದು ಎಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ಢಾಕಾದಲ್ಲಿರುವ ಢಾಕೇಶ್ವರಿ ರಾಷ್ಟ್ರೀಯ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಬಳಿಕ ಹಿಂದುಗಳೊಂದಿಗೆ ನವರಾತ್ರಿಯ ಶುಭಾಶಯ ವಿನಿಮಯ ಮಾಡಿಕೊಂಡರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹಸೀನಾ , ನಾವು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಇದು ತಂತ್ರಜ್ಞಾನದ ಯುಗವಾಗಿದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಂತ್ರಜ್ಞಾನದ ಬಳಕೆಯಿಂದ ಖಂಡಿತವಾಗಿ ಪತ್ತೆ ಮಾಡಲಾಗುತ್ತದೆ ಎಂದು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.