ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಸಿದ್ದರಾಮಯ್ಯ ಅವರು ‘ಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ, ಎಂದು ಅವರು ಹೆಸರು ಹೇಳದೇ ಆರೋಪಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.