ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ, ಇದು ಯಾವ ಸೀಮೆ ನ್ಯಾಯ?’ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
‘ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ,‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.