ದುಬೈ (ವಿಶ್ವ ಕನ್ನಡಿಗ ನ್ಯೂಸ್) ; ನಿನ್ನೆ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ-20 ಪಂದ್ಯದಲ್ಲಿ ಮೊದಲ ಎಸೆತದಲ್ಲಿ ಔಟಾಗಿ ಕಳಪೆ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಬದಲು ಮುಂದಿನ ಪಂದ್ಯದಲ್ಲಿ ಇಶಾನ್ ಕಿಶನ್ ಆಯ್ಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಕೊಹ್ಲಿ ನೇರವಾಗಿ ಉತ್ತರಿಸಿದ್ದಾರೆ.
ಪಂದ್ಯ ಮುಗಿದ ಬಳಿಕ ಸಂದರ್ಶನದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿಗೆ ಪಾಕ್ ವಿರುದ್ಧದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ ಬದಲು ಮುಂದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅವರಿಗೆ ಆರಂಭಿಕ ಆಟಗಾರನ ಸ್ಥಾನ ನೀಡುತ್ತೀರಾ ಎಂಬ ಪ್ರಶ್ನೆ ಎದುರಾಯಿತು. ಈ ಪ್ರಶ್ನೆ ಎದುರಾದ ಕೂಡಲೇ ನಕ್ಕ ವಿರಾಟ್ ಕೊಹ್ಲಿ ‘ಟಿ ಟ್ವೆಂಟಿ ತಂಡದಿಂದ ರೋಹಿತ್ ಶರ್ಮಾ ಅವರನ್ನು ನಿಮ್ಮಿಂದ ಹೊರಗಿಡಲಾಗುತ್ತಾ, ಕಳೆದ ಪಂದ್ಯದಲ್ಲಿ ತಂಡಕ್ಕೆ ಆತ ನೀಡಿದ ಕೊಡುಗೆ ಏನೆಂಬುದನ್ನು ತಿಳಿದಿದ್ದರೂ ಸಹ ಈ ರೀತಿಯ ನಿರ್ಧಾರ ಕೈಗೊಳ್ಳಲು ಆಗುತ್ತಾ’ ಎಂದು ಮರು ಪ್ರಶ್ನೆ ಕೇಳಿದರು.
ಇನ್ನೂ ಮುಂದುವರೆದು ಮಾತನಾಡಿದ ಕೊಹ್ಲಿ ‘ಈ ವಿಷಯದ ಕುರಿತಾಗಿ ವಿವಾದ ಸೃಷ್ಟಿಸುವ ಇಚ್ಛೆ ಇದ್ದರೆ ಮೊದಲೇ ಹೇಳಿ’ ಎಂದು ನೇರವಾಗಿ ಉತ್ತರಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.