(www.vknews.in) ; ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಾಮಾಜಿಕ ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ *ದಿನಾಂಕ 01.11.2021, ಸೋಮವಾರ ಬೆಳಿಗ್ಗೆ 10.00 ಗಂಟೆಗೆ ನೆಹರು ಮೈದಾನ, ಮಂಗಳೂರು ಇಲ್ಲಿ *ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ* ಆಚರಣೆಯ ಸುಸಂದರ್ಭದಲ್ಲಿ 2021 ನೇ ಸಾಲಿನ ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನಮ್ಮೆಲ್ಲರ ಹೆಮ್ಮೆಯ ಸಂಸ್ಥೆಯಾದ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ), ತೋಕೂರು, ಹಳೆಯಂಗಡಿ ಇದರ ಪರವಾಗಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ ಇವರಿಗೆ ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ಅಂಗಾರ ಎಸ್ ರವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರು,ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಪೊಲೀಸ್ ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ಮಹಾಪೌರರು, ವಿವಿಧ ಇಲಾಖೆಯ ಆಯುಕ್ತರು, ಕರ್ನಾಟಕ ವಿವಿಧ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರುಗಳು, ಹಾಗೂ ಹಲವಾರು ಗಣ್ಯಾತೀತರ ಸಮ್ಮುಖದಲ್ಲಿ ನಡೆದ ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಮ್ಮ ಸ್ಪೋರ್ಟ್ಸ್ ಕ್ಲಬ್ ನ ಗೌರವ ಅಧ್ಯಕ್ಷರು,ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ಸದಸ್ಯೆಯರು ಸಂಸ್ಥೆಯ ಗೌರವಾದರ ಪುರಸ್ಕಾರಕ್ಕೆ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.