ಶ್ರೀನಿವಾಸಪುರ (ವಿಶ್ವಕನ್ನಡಿಗ ನ್ಯೂಸ್): ಅಧಿಕಾರಿಗಳು ಮೂಲ ಸೌಕರ್ಯ ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು , ತಾಲ್ಲೂಕಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಅಗತ್ಯವಾದ ಕಾಮಗಾರಿ ಕೈಗೊಳ್ಳಲು ರೂ .೪.೫೦ ಕೋಟಿ ಮಂಜೂರಾಗಿದೆ.
ಬೆಸ್ಕಾಂ ಅಧಿಕಾರಿಗಳು ತಾಲ್ಲೂಕಿನಲ್ಲಿ ಸಂಚರಿಸಿ , ಸಮಸ್ಯೆ ಪತ್ತೆ ಹಚ್ಚಿ ನಿವಾರಣೆಗೆ ಅಗತ್ಯವಾದ ಕಮ ಕೈಗೊಳ್ಳಬೇಕು . ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು . ತಾಲ್ಲೂಕಿನಲ್ಲಿ ಕುಡಿಯುವ ನೀರು ಪೂರೈಕೆಗೆ ಪೂರಕವಾದ ಕಾಮಗರಿಗಳನ್ನು ಕೈಗೊಳ್ಳಬೇಕು . ಅಗತ್ಯ ಇರುವ ಕಡೆ ಹೊಸ ಕೊಳವೆ ಬಾವಿಗಳನ್ನು ನಿರ್ಮಿಸಬೇಕು ಈಗ ತಾಲ್ಲೂಕಿನಾದ್ಯಂತ ಮಳೆಯಾಗುತ್ತಿದೆ ಆದರೂ ಕುಡಿಯವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು .
ಲೋಕೋಪಯೋಗಿ ಇಲಾಖೆ ಮಳೆಯಿಂದಾಗಿ ಹಾನಿಗೊಂಡಿರುವ ರಸ್ತೆಗಳ ದುರಸ್ತಿ ಮಾಡಿಸಬೇಕು . ರಸ್ತೆ ಹಳ್ಳ ಮುಚ್ಚಲು ಆದ್ಯತೆ ನೀಡಬೇಕು . ಕಟ್ಟ ರಸ್ತೆ ಪರಿಣಾಮವಾಗಿ ಅಪಘಾತ ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಪ್ರತಿ ತಿಂಗಳು ಮೊದಲ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು . ಅಧಿಕಾರಿಗಳು ಅದಕ್ಕೆ ಸಿದ್ಧರಾಗಿ ಬರಬೇಕು . ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳು ಮುಂದಿನ ಸಭೆಯೊಳಗೆ ಕಾರ್ಯರೂಪಕ್ಕೆ ಬಂದಿರಬೇಕು , ಗ್ರಾಮೀಣ ಪ್ರದೇಶದ ಜನ ಕಲಸ ಬಿಟ್ಟು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು . ನಿಗದಿತ ಸಮಯದೊಳಗೆ ಅವರ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು .
ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಡಿಸಿಸಿ ಬ್ಯಾಂಕ್ ನಿರ್ದೇಶದಕ ವೆಂಕಟರೆಡ್ಡಿ ಹಾಗೂ ವಿವಿಧ ಇಲಾಖೆಗೆ ಅಧಿಕಾರಿಗಳು ಇದ್ದರು .
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.