(www.vknews.com) : ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ, ದ. ಕ. ಜಿಲ್ಲೆಇವರುಗಳ ಮಾರ್ಗದರ್ಶನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇವರುಗಳ ಸಹಕಾರದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು ಹಳೆಯಂಗಡಿ ಇದರ ಸಂಯೋಜನೆಯಲ್ಲಿ ನಮ್ಮ ತುಳುನಾಡಿನ ಪ್ರಮುಖ ಆಚರಣೆಗಳಲ್ಲಿ ಒಂದಾದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ -2021 ಕಾರ್ಯಕ್ರಮವು ದಿನಾಂಕ 05.11.2021 ರಂದು ಶುಕ್ರವಾರ ಸಂಜೆ ಘಂಟೆ 3.30 ಕ್ಕೆ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.
ಖ್ಯಾತ ಪತ್ರಕರ್ತ ಹಾಗು ರಂಗಕರ್ಮಿಯಾಗಿರುವ ಶ್ರೀ ಪರಮಾನಂದ ಸಾಲ್ಯಾನ್ ಸಸಿಹಿತ್ಲು* ಇವರು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ತುಳುನಾಡ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಿರುವ ತುಳುನಾಡ ತುಡರ್ ಪರ್ಬ ಮತ್ತು ಬಲಿಂದ್ರ ಪೂಜೆಯ ಮಹತ್ವದ ಬಗ್ಗೆ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರು ಕಸ್ತೂರಿ ಪಂಜ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ,ಸಂಸ್ಥೆಯ ಜನ ಸೇವೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರಶಸ್ತಿ ದೊರಕಿರುವುದನ್ನು ಶ್ಲಾಘಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷರು ಶ್ರೀ ಮೋಹನ್ ದಾಸ್ ಅಧ್ಯಕ್ಷರು ಶ್ರೀ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಾಧ್ಯಕ್ಷೆ ಶೋಭಾ ಅಂಚನ್ ಉಪಸ್ಥಿತರಿದ್ದರು.
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿರುವ ಶ್ರೀ ಯೋಗೀಶ್ ಕೋಟ್ಯಾನ್, ಸಂಸ್ಥೆಯ ನಿಕಟಪೂರ್ವ ಗೌರವ ಅಧ್ಯಕ್ಷರಾಗಿದ್ದ ಶ್ರೀ ನಾರಾಯಣ ಜಿಕೆ, ಸಂಸ್ಥೆಯ ಗೌರವ ಸಲಹೆಗಾರರಾದ ಲಕ್ಷ್ಮಣ್ ಸಾಲ್ಯಾನ್, ಗಣೇಶ್ ಸುವರ್ಣ, ಬೆಂಗಳೂರು, ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಸದಸ್ಯರು, ಮಕ್ಕಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಮಹಿಳಾ ಸಮಿತಿ ಸದಸ್ಯೆಯರಾದ ಶ್ರೀಮತಿ ವಾಣಿ ಮಹೇಶ್, ಶ್ರೀಮತಿ ಸುಜಾತಾ ಜಿ.ಕೆ. ಮತ್ತು ಶ್ರೀಮತಿ ಗೀತಾ ಸದಾನಂದ ಪ್ರಾರ್ಥನೆ ಹಾಡಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ವಂದಿಸಿದರು. ಕಾರ್ಯಾಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.