(www.vknews.com) : ಮಂಗಳೂರಿನ ರಾಮಕೃಷ್ಣ ಮಠಕ್ಕೆ ಕರ್ನಾಟಕ ಸರಕಾರ ಸ್ವಾತ್ಯಂತ್ರ್ಯ ಅಮೃತ ಮಹೋತ್ಸವದ ವಿಶೇಷ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ರಾಮಕೃಷ್ಣ ಮಠದ ಸೇವೆಯನ್ನು ಗುರುತಿಸಿದ ಸರಕಾರ ವಿಶೇಷವಾಗಿ ಸುಮಾರು ಐದು ವರ್ಷಗಳ ಕಾಲ ಮಂಗಳೂರು ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜರುಗಿದ ಸ್ವಚ್ಛತಾ ಕಾರ್ಯವನ್ನು ಗಮನದಲ್ಲಿಟ್ಟುಕೊಂಡು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನವೆಂಬರ್ 1, 2021 ಕರ್ನಾಟಕ ರಾಜ್ಯೋತ್ಸವದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮಂಗಳೂರಿನ ರಾಮಕೃಷ್ಣ ಮಠದ ಪರವಾಗಿ ಸ್ವಾಮಿ ಏಕಗಮ್ಯಾನಂದಜಿಯವರು ಕರ್ನಾಟಕದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರಿಂದ ರಾಜ್ಯೋತ್ಸವದ ಪ್ರಯುಕ್ತ ನೀಡಲಾದ ವಿಶೇಷ ರಾಜ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶ್ರೀ ಸುನೀಲ್ ಕುಮಾರ್ ವಿ ಮಾನ್ಯ ಸಚಿವರು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ, ಕಂದಾಯ ಸಚಿವ ಶ್ರೀ ಆರ್ ಅಶೋಕ್, ಸಂಸದ ತೇಜಸ್ವೀ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು. ರಾಮಕೃಷ್ಣ ಮಠ ಸೇರಿದಂತೆ ಹತ್ತು ಸಂಘ ಸಂಸ್ಥೆಗಳನ್ನು ಹಾಗೂ 66 ಜನ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.