ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಕೋಲಾರ ಜಿಲ್ಲೆಯಾದ್ಯಂತ ಪ್ರಸ್ತುತ ಎಡಬಿಡದೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ವರದಿಯಂತೆ ಇನ್ನೂ ಎರಡು ದಿನಗಳು ಸತತವಾಗಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶದಂತೆ ಮಾಲೂರು ಬಿ.ಇ.ಓ ಕೃಷ್ಣಮೂರ್ತಿ ರವರು ಎರಡು ದಿನ ರಜೆ ಘೋಷಿಸಲಾಗಿದೆ.
ದಿನಾಂಕ: 19-11-2021 ರ ಶುಕ್ರವಾರ ಹಾಗೂ 20-11-2021 ನೇ ಶನಿವಾರ ಎರಡು ದಿನಗಳ ಅವಧಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಫ್ರೌಡಶಾಲೆಗಳಿಗೆ ರಜೆ ಘೋಷಿಸುವಂತೆ ಸೂಚಿಸಿರುತ್ತಾರೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.