ಕೋಲಾರ(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ಶ್ರಮಶಕ್ತಿ ಸಾಲದ ಯೋಜನೆ , ಕಿರು ( ಮೈಕ್ರೋ ) ಸಾಲ ಸಹಾಯಧನ ಯೋಜನೆ , ಗಂಗಾ ಕಲ್ಯಾಣ ಯೋಜನೆ , ಟ್ಯಾಕ್ಸಿ , ಗೂಡ್ಸ್ ವಾಹನ ಖರೀದಿ ಯೋಜನೆ , ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಮೈಕ್ರೋ ವೈಯಕ್ತಿಕ ಸಾಲ ಕೋವಿಡ್ -19 ( ಮಹಿಳೆಯರಿಗೆ ಮಾತ್ರ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ , ಕ್ರಿಶ್ಚಿಯನ್ , ಜೈನರು , ಬೌದ್ಧರು , ಸಿಬ್ಬರು ಹಾಗೂ ಪಾರ್ಸಿ ಜನಾಂಗದವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿದಾರರು ಕೋಲಾರ ಜಿಲ್ಲೆಯ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 81,000 ರೂ.ಗಳು ಮತ್ತು ನಗರ ಪ್ರದೇಶದವರಿಗೆ 1,03,000 ರೂ.ಗಳು ಮೀರಬಾರದು.
ಮಹಿಳೆಯರಿಗೆ ಶೇಕಡ 33 ರಷ್ಟು ಹಾಗೂ ಅಂಗವಿಕಲರಿಗೆ ಶೇಕಡ 3 ರಷ್ಟು ಮೀಸಲಾತಿಯಿರುತ್ತದೆ. ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ , ರೇಷನ್ ಕಾರ್ಡ್ , ಆಧಾರ್ ಕಾರ್ಡ್ , ಚುನಾವಣಾ ಗುರುತಿನ ಚೀಟಿ , IFSC ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿ , ಯೋಜನಾ ವರದಿ ಹಾಗೂ ಅರ್ಜಿದಾರರ ಮತ್ತು ಜಾಮೀನುದಾರರ 2 ಭಾವಚಿತ್ರಗಳು ಸಲ್ಲಿಸಬೇಕು. ಅರ್ಜಿಗಳನ್ನು ಆನ್ಲೈನ್ kmdc.kar.nic.in/loan/login.aspx ಮೂಲಕ ಡಿಸೆಂಬರ್ 15 ರೊಳಗಾಗಿ ಸಲ್ಲಿಸಬೇಕು. ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಡಿಸೆಂಬರ್ 21 ರೊಳಗಾಗಿ ಸಲ್ಲಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.