ಕೋಲಾರ(ವಿಶ್ವಕನ್ನಡಿಗ ನ್ಯೂಸ್):ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ತವಾಗಿದ್ದು , ಮುನ್ನಚ್ಚರಿಕಾ ಕ್ರಮವಾಗಿ ನ .೧೯ ಹಾಗೂ ೨೦ ರಂದು ಎರಡು ದಿನ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ ರೇವಣಸಿದ್ದಪ್ಪ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಈಗಾಗಲೇ ನ .೧೯ ಮತ್ತು ೨೦ ರಂದು ಬಿರುಗಾಳಿಯಿಂದ ಕೂಡಿದ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು , ಗುರುವಾರವೂ ಮಳೆ ಬೆಳಗ್ಗಿನಿಂದ ಎಡೆಬಿಡದೇ ಸುರಿಯುತ್ತಿದೆ. ಬಹುತೇಕ ಕಡೆಗಳಲ್ಲಿ ಶಾಲೆಗಳ ಮೇಲ್ಯಾವಣಿ ಮೇಲೆ ಮಳೆ ನೀರು ನಿಂತು ಕಟ್ಟಡಗಳು ಸುರಿಯುತ್ತಿವ , ಜತೆಗೆ ಕೋಡ್ ಎಸ್ಒಪಿ ಪಾಲನೆ ಕಡ್ಡಾಯವಾಗಿರುವುದರಿಂದ ಮಕ್ಕಳಿಗೆ ಪಾಠಪವಚನಗಳಿಗೆ ಅಡ್ಡಿಯಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ನೀಡುವಂತೆ ಮನವಿ ಮಾಡಿದ್ದು , ಅದರಂತೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು , ನ .೧೯ ಮತ್ತು ೨೦ ರಂದು ಎರಡು ದಿನ ಜಿಲ್ಲೆಯ ಎಲ್ಲಾ ಸರ್ಕಾರಿ , ಅನುದಾನಿತ , ಅನುದಾನರಹಿತ ಕಿರಿಯ , ಹಿರಿಯ , ಪೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶಿದ್ದಾರ ಎಂದು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.