ಕೋಲಾರ (ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ -18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು ಯಾವುದೇ ಅಭ್ಯರ್ಥಿಯು ನಾಮಪತ್ರಗಳನ್ನು ಹಿಂಪಡೆದಿಲ್ಲ ಆದ್ದರಿಂದ ವಿಧಾನ ಪರಿಷತ್ ಚುನಾವಣೆ ಅಂತಿಮ ಕಣದಲ್ಲಿ 4 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು .
ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ 18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆ ಹಾಗೂ ವಿಶ್ವ ಏಡ್ಸ್ ದಿನಾಚಾರಣೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಂ.ಎಲ್. ಅನಿಲ್ ಕುಮಾರ್ , ಜನತಾದಳ ( ಜಾತ್ಯತೀತ ) ಪಕ್ಷದ ಅಭ್ಯರ್ಥಿಯಾಗಿ ವಿ.ಇ.ರಾಮಚಂದ್ರ , ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಡಾ || ಕೆ.ಎನ್ವೇಣುಗೋಪಾಲ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಪಿ.ಅನಿಲ್ ಕುಮಾರ್ ಅವರು ಸ್ಪರ್ಧಿಸಿದ್ದರೆ ಎಂದು ಅವರು ತಿಳಿಸಿದರು .
ಚುನಾವಣೆ ಮತದಾನ ಡಿಸೆಂಬರ್ 10 ರಂದು ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭವಾಗಿ ಸಂಜೆ 4.00 ಗಂಟೆಗೆ ಮುಕ್ತಾಯವಾಗುತ್ತದೆ. ಗ್ರಾಮ ಪಂಚಾಯಿತಿ , ಪುರಸಭೆ ಹಾಗೂ ನಗರಸಭೆ ಸದಸ್ಯರು ಮತದಾನರಾಗಿದ್ದು ಕೋಲಾರ ಜಿಲ್ಲೆಯಲ್ಲಿ 2925 ಮತದಾರರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2925 ಮತದಾರರು , 2675 ಪುರುಷರು ಹಾಗೂ 2925 ಮಹಿಳೆಯರು ಸೇರಿ ಒಟ್ಟು 5600 ಮತದಾರರಿದ್ದರೆ , ಒಟ್ಟು 321 ಮತಗಟ್ಟೆಗಳನ್ನು ಆಯೋಜಿಸಿದ್ದು , 73 ಅತಿ ಸೂಕ್ಷ್ಮ ಮತ್ತು 105 ಸೂಕ್ಷ್ಮ ಮತಕಟ್ಟೆಗಳನ್ನು ಗುರುತಿಸಿದ್ದು ಸೂಕ್ತ ಬಂದೊಬಸ್ತ್ ಮತ್ತು ರಕ್ಷಣೆಯನ್ನು ಒದಗಿಸಲು ಪೋಲಿಸ್ ಸಿಬ್ಬಂದಿ ಸಿದ್ದರಾಗಿದ್ದಾರೆ. ಚುನಾವಣೆಯ ಮತ ಎಣಿಕೆಯನ್ನು ಡಿಸೆಂಬರ್ 14 ರಂದು ಬೆಳಿಗ್ಗೆ 8.00 ಗಂಟೆಗೆ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಡಿಸೆಂಬರ್ 01 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ವಿಶ್ವ ಏಡ್ಸ್ ದಿನಾಚಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ . ಅಸಮಾನತೆಗಳನ್ನು ಕೊನೆಗೊಳಿಸಿ . ಏಡ್ಸ್ನ್ನು ಕೊನೆಗೊಳಿಸಿ . ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಈ ವರ್ಷದ ಘೋಷಣೆಯಾಗಿದೆ. ಸಮುದಾಯದಲ್ಲಿ ಏಡ್ಸ್ ಖಾಯಿಲೆಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು .
ಹೆಚ್.ಐ.ವಿ ಸೋಂಕು ಕೇವಲ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ , ತಪಾಸಣೆಗೊಳಿಸದ ರಕ್ತ ಮತ್ತು ರಕ್ತದ ಉಪ ಪದಾರ್ಥಗಳಿಂದ , ಸೋಂಕಿತ ತಾಯಿಯಿಂದ ಮಗುವಿಗೆ ಹಾಗೂ ಸೋಂಕಿತ ಸೂಜಿ , ಸಿರಿಂಜ್ ಮತ್ತು ಶಸ್ತ್ರಕ್ರಿಯಾ ಸಾಧನಗಳಿಂದ ಮಾತ್ರ ಹರಡುತ್ತದೆ ಎಂದು ಅವರು ತಿಳಿಸಿದರು . ಈ ಸಂದರ್ಭದಲ್ಲಿ ಚುನಾವಣೆ ತಶಿಲ್ದಾರ್ ನಾಗವೇಣಿ , ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ || ಕಮಲ ಅವರು ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.