ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):- ಮಾಲೂರು ತಾಲ್ಲೂಕಿನ ಲಕ್ಕೂರು ಗ್ರಾಮದ ಪ್ರಾಚೀನ ಕಾಲದ ಗತವೈಭವ ಬಿಂಬಿಸುವ ಚೋಳರ ಕಾಲದ ಶ್ರೀ ಪ್ರಸನ್ನ ಸೋಮಶ್ವೇರ ದೇವಾಲಯದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ವಿಶೇಷ ಪೂಜೆ, ಬಿಲ್ವಾರ್ಚನೆ, ಅಭಿಷೇಕ, ನಡೆಸಲಾಯಿತು.
ಕಾರ್ತಿಕ ಮಾಸದ ಕೊನೆಯ ಸೋಮವಾರದ ಹಿನ್ನೆಲೆಯಲ್ಲಿ ತಾಲ್ಲೂಕಿನ ಬಹುತೇಕ ಎಲ್ಲ ಶಿವಾಲಯಗಳಲ್ಲಿ ಜನಜಂಗುಳಿ ನೆರೆದಿತ್ತು. ಮುಂಜಾನೆಯಿಂದಲೇ ರುದ್ರಾಭಿಷೇಕ ಸೇರಿದಂತೆ ಹಲವು ಸೇವೆಗಳು ನಡೆದವು. ಆಗಾಗ ಮಳೆ ಬಿಳುತ್ತಿದ್ದರು ಅದನ್ನು ಲೆಕ್ಕಿಸದೇ ಭಕ್ತಾಧಿಗಳು, ಈಶ್ವರನ ಪೂಜೆಗೆ ಶ್ರೇಷ್ಠವಾದ ದಿನವಾದ ಕಾರಣ ಬಿಲ್ವಪತ್ರೆ, ಸ್ಪಟಿಕ, ಕಣಗಿಲ ಹೂಗಳನ್ನು ಭಕ್ತರು ದೇಗುಲಕ್ಕೆ ಕೊಂಡೊಯ್ಯುತ್ತಿದ್ದುದು ಕಂಡುಬಂತು. ರುದ್ರಾಭಿಷೇಕ ನಡೆಯುವಾಗ ಭಕ್ತರು ಕಣ್ಮುಚ್ಚಿ ಪರಶಿವನನ್ನು ಧ್ಯಾನಿಸಿದರು. ಸೂರ್ಯ ಪಶ್ಚಿಮದತ್ತ ಜಾರುತ್ತಿದ್ದಂತೆ ಸಂಜೆ ಲಕ್ಕೂರಿನ ಸುತ್ತಮುತ್ತಲಿನ ಜನರಿಂದ ಹಾಗೂ ಶ್ರೀ ಪ್ರಸನ್ನ ಸೋಮಶ್ವೇರ ಸ್ವಾಮಿ ದೇವಾಲಯ ಸಮಿತಿ ಹಾಗೂ ಊರಿನ ಗ್ರಾಮಸ್ಥರಿಂದ ಲಕ್ಷದೀಪೋತ್ಸವಕ್ಕೆ ಸಿದ್ಧತೆಗಳು ಚುರುಕಾದವು. ಬಹುತೇಕ ದೇಗುಲಗಳಲ್ಲಿ ಲಕ್ಷದೀಪೋತ್ಸವ ಸಡಗರ ಸಂಭ್ರಮದಿಂದ ನಡೆಯಿತು.
ಈ ಸಂದರ್ಭದಲ್ಲಿ ಲಕ್ಕೂರು ಹಾಗೂ ಸುತ್ತಮುತ್ತಲಿನ ಅನೇಕ ಭಕ್ತಧಿಗಳು ಹಾಜರಿದ್ದರು ಹಾಗೇ ಶಿವ ದೇವಾಲಯದ ಮುಂದೆ ನೂರಾರು ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ದೀಪ ಹಚ್ಚುತ್ತಿದ್ದು ವಿಶೇಷವಾಗಿತ್ತು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.