ಕೋಲಾರ (ವಿಶ್ವಕನ್ನಡಿಗ ನ್ಯೂಸ್): 2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವೆಗೆ ವಿಸ್ತರಿಸಲಾಗಿದೆ .
ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಎಲ್ಲಾ ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಆನ್ಲೈನ್ ಮೂಲಕ ಸಲ್ಲಿಸತಕ್ಕದ್ದು , 2021-22ನೇ ಸಾಲಿಗೆ ಪ್ರವೇಶವನ್ನು ಪಡೆದು ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ( ಮುಸ್ಲಿಂ , ಕ್ರಿಶ್ಚಿಯನ್ , ಜೈನ್ , ಸಿಖ್ , ಬೌದ್ಧ ಮತ್ತು ಪಾರ್ಸಿ ) ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ರೂ .9000 / -ಗಳನ್ನು ನೀಡಲಾಗುತ್ತದೆ .
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿದ್ದು , ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು . ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ ದೂರದವರಾಗಿರಬೇಕು .
ಒಂದೇ ನಗರದ ವ್ಯಾಪ್ತಿಯಲ್ಲಿ ಇರುವವರು ಅರ್ಹರಿರುವುದಿಲ್ಲ . ಕುಟುಂದ ವಾರ್ಷಿಕ ವರಮಾನ ರೂ .2.00 ಲಕ್ಷಗಳು ಮೀರಿರಬಾರದು . ಹಿಂದಿನ ವರ್ಷದ ಪರೀಕ್ಷೆಗಳಲ್ಲಿ ಯಾವುದೇ ಬ್ಯಾಕ್ ಲ್ಯಾಗ್ ಇರಬಾರದು . 2021-22ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಿ ಸ್ಥಳವಕಾಶವಿಲ್ಲದೇ ಬಾಕಿ ಇರುವ ಅರ್ಜಿಗಳಿಗೆ ಮೊದಲ ಅದ್ಯತೆ ನೀಡಲಾಗುವುದು .
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ , ಮೌಲಾನಾ ಆಜಾದ್ ಭವನ , ನೆಲ ಮಹಡಿ , ಶ್ರೀ ದೇವರಾಜ್ ಅರಸು ಬಡಾವಣೆ , 2 ನೇ ಬ್ಲಾಕ್ , ಟಮಕ ವಾರ್ಡ್ ನಂ .1 , ಕೋಲಾರ ದೂರವಾಣಿ ಸಂಖ್ಯೆ : 08152-295257 ಇಲ್ಲಿಗೆ ಸಂಪರ್ಕಿಸಬಹುದಾಗಿರುತ್ತದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.