ಬೈಂದೂರು ,(ವಿಶ್ವ ಕನ್ನಡಿಗ ನ್ಯೂಸ್ ): ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ನಂತರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿದರು.
ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ,ಬೈಂದೂರು ತಹಸಿಲ್ದಾರ್ ಶೋಭಾಲಕ್ಷ್ಮಿ , ಎಎಸ್ಪಿ ಕುಮಾರ ಚಂದ್ರ , ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.