ಊಟಿ(www.vknews.in): ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಬುಧವಾರ ಪತನಗೊಂಡಿದೆ. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಹೆಲಿಕಾಪ್ಟರ್ನಲ್ಲಿ ಇದ್ದರು. ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವುದು ದೃಢಪಟ್ಟಿದೆ.
ಜನರಲ್ ರಾವತ್ ಅವರ ಸ್ಥಿತಿಯ ಬಗ್ಗೆ ತಕ್ಷಣದ ಮಾಹಿತಿ ಇಲ್ಲ.ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ ಹದಿನಾಲ್ಕು ಮಂದಿ ಇದ್ದರು.
ರಕ್ಷಿಸಲ್ಪಟ್ಟ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ, ರಕ್ಷಣಾ ಸಹಾಯಕರು, ಭದ್ರತಾ ಕಮಾಂಡೋಗಳು ಮತ್ತು ಐಎಎಫ್ ಪೈಲಟ್ ಅವರು ಮಿ-ಸಿರೀಸ್ ಚಾಪರ್ನಲ್ಲಿದ್ದ ಸಂದರ್ಭದಲ್ಲಿ ತಮಿಳುನಾಡಿನ ಕೊಯಮತ್ತೂರು ಮತ್ತು ಸೂಲೂರು ನಡುವೆ ಅಪಘಾತಕ್ಕೀಡಾಗಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.