ಬೆಳ್ತಂಗಡಿ (www.vknews.com) : ಇಲ್ಲಿನ ಖಾಸಗಿ ಕಾಲೇಜ್ ನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಬೆಳ್ತಂಗಡಿಯ ಸೋಮಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೂಲತಃ ಮೂಡಿಗೆರೆ ನಿವಾಸಿ, ಬೆಳ್ತಂಗಡಿಯ ಸುದೆಮುಗೇರು ಸಂಜಯನಗರ ಬಳಿ ಪಿಜಿಯಲ್ಲಿ ವಾಸ್ತವ್ಯವಿದ್ದ ಸಮರ್ಥ್ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಸಮರ್ಥ್ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈತ ತನ್ನ ಗೆಳೆಯನೊಂದಿಗೆ ನದಿಗೆ ಹೋಗಿದ್ದು ಆಕಸ್ಮಿಕವಾಗಿ ನದಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ದಾವೂದ್ ಹಾಗೂ ಹಕೀಂ ಎಂಬವರು ಮೃತದೇಹವನ್ನು ಮೇಲಕ್ಕೆತ್ತಿದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.