ಉಪ್ಪಿನಂಗಡಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್ಐ ಮುಖಂಡರನ್ನುಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪೊಲೀಸರ ಲಾಠಿ ಚಾರ್ಜ್ ನಲ್ಲಿ ಪ್ರತಿಭಟನಾ ನಿರತ ಸುಮಾರು 50ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ.
ಸ್ಥಳದಲ್ಲಿದ್ದ ಧರ್ಮಗುರುಗಳಾದ ಸೈಯ್ಯದ್ ಹಾದಿ ಇಬ್ರಾಹಿಂ ತಂಗಲ್ ಆತೂರು ಇವರ ಮೇಲೂ ಪೊಲೀಸರು ಲಾಠಿಪ್ರಹಾರ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.