ಕೋಲಾರ(ವಿಶ್ವಕನ್ನಡಿಗ ನ್ಯೂಸ್): ಪಾಪ್ಯುಲರ್ ಫಂಟ್ ನಾಯಕರ ಅಕ್ರಮ ಬಂಧನ ವಿರೋಧಿಸಿ ಮತ್ತು ಬಂಧಿತರ ಬಿಡುಗಡೆಗಾಗಿ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ನಡೆಸಿದ ಉಪ್ಪಿನಂಗಡಿ ಪೊಲೀಸರ ಕೃತ್ಯವನ್ನು ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತೀವ್ರವಾಗಿ ಖಂಡಿಸಿದ್ದಾರೆ .
ಈ ಘಟನೆಗೆ ಸಂಬಂಧಿಸಿದಂತೆ ಕೋಲಾರದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಮಾಯಕರನ್ನು ಕೂಡಲೇ ಬೇಷರತ್ತಾಗಿ ಬಿಡುಗಡೆಗೊಳಿಸಬೇಕು. ಅಮಾನವೀಯವಾಗಿ ಲಾಠಿ ಚಾರ್ಜ್ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತುಪಡಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದರು . ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ ಮತ್ತು ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ . ಅಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ವಿಚಾರಣೆಗಾಗಿ ಕರೆ ತಂದಿದ್ದೇವೆಂದು ಪೊಲೀಸರು ಸಮಜಾಯಿಷಿ ನೀಡಿದ್ದರು . ಆದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರಲ್ಲಿ ಎಳ್ಳಷ್ಟೂ ಆಧಾರವಿರಲಿಲ್ಲ .
ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದಾಗ ಬಹಳ ಸಮಯದ ನಂತರ ಒಬ್ಬರನ್ನು ಬಿಡುಗಡೆಗೊಳಿಸಿ ಇನ್ನಿಬ್ಬರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಯೋಜನೆ ಹೊಂದಿದ್ದರು .
ಆದರೆ ಉಳಿದಿಬ್ಬರು ಅಮಾಯಕರನ್ನು ಬಿಡುಗಡೆಗೊಳಿಸುವಂತೆ ಪ್ರತಿಭಟನೆ ಮುಂದುವರಿಸಿದಾಗ ಪೊಲೀಸರು ಯಾವುದೇ ಸೂಚನೆ ನೀಡದೇ ಯದ್ವಾತದ್ವಾ ಲಾಠಿ ಬೀಸಿದ್ದಾರೆ . ಘಟನೆಯಲ್ಲಿ ಹಲವಾರು ಮಂದಿ ಪ್ರತಿಭಟನಕಾರರು ಗಂಭೀರ ಗಾಯಗೊಂಡಿದ್ದಾರೆ .
ಸುಳ್ಳು ಕೇಸಿನಲ್ಲಿ ಅಮಾಯಕರನ್ನು ಸಿಲುಕಿಸುವ ಪೊಲೀಸರ ಕಮ ಖಂಡನಾರ್ಹ . ಅಮಾಯಕರನ್ನು ಕೂಡಲೇ ಬೇಷರತಾಗಿ ಬಿಡುಗಡೆಗೊಳಿಸಬೇಕು . ಅಮಾನವೀಯವಾಗಿ ಲಾಠಿ ಚಾರ್ಜ್ ನಡೆಸಿದ ಉಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತುಪಡಿಸಬೇಕೆಂದು ಆಗಹಿಸಿರುವ ಯಾಸಿರ್ ಹಸನ್ , ಬರ್ಬರ ಲಾಠಿ ಚಾರ್ಜ್ ಘಟನೆಯನ್ನು ಖಂಡಿಸಿದ್ದಾರೆ .
ಪ್ರತಿಭಟನೆಯಲ್ಲಿ ಪಾಪುಲರ್ ಪಂಟ್ ಆಫ್ ಇಮಡಿಯಾ ಜಿಲ್ಲಾಧ್ಯಕ್ಷ ಶೇಖ್ ಜಾಫರ್ ಸಾದಿಕ್ , ಇ ೦ ತಿಯಾಜ್ ಪಾಷ , ಸೈಯದ್ ನವಾಜ್ ವುದೀನ್ , ಎಸ್.ಡಿ.ಪಿ.ಐ ಕಾರ್ಯದರ್ಶಿ ಶಾರೂಕ್ ಪಾಷ , ಇನ್ನಿತರರು ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.