ಕಾಪು (www.vknews.com) : ಕಾಪು ಪುರಸಭಾ ಚುನಾವಣೆ – 2021 ರಲ್ಲಿ ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಕಣಕ್ಕಿಳಿದಿರುವ 9 ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮತ್ತು ಪ್ರಚಾರ ಸಭೆಯನ್ನು ಕಾಪು ಪರಿಸರದಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ರವರು ಕಾಪು ಪುರಸಭೆ ಅಸ್ತಿತ್ವಕ್ಕೆ ಬಂದು 5 ವರ್ಷ ಕಳೆದವು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯು ಆಳ್ವಿಕೆಯನ್ನು ನಡೆಸಿದೆ. ಈ ಸಂದರ್ಭದಲ್ಲಿ ಜನತೆಗೆ ನೀಡಿರುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದ್ದು. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದೆ ಹಾಗೂ ಅಲ್ಪಸಂಖ್ಯಾತರ ವಿರೋಧಿಯಂತೆ ವರ್ತಿಸುತ್ತಿದೆ.ಬಿಜೆಪಿಯು ಅಭಿವೃದ್ಧಿ ಕೆಲಸಗಳ ವಿಚಾರದಲ್ಲು ಕೂಡ ಧರ್ಮಾಧಾರಿತ ತಾರತಮ್ಯ ಮಾಡಿರುವುದಲ್ಲದೆ ತಮ್ಮ ಎಂದಿನ ಹಿಂಸಾತ್ಮಕ ಕೋಮುವಾದಿ ನೀತಿಯನ್ನು ಬಲಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ ಹಾಗೂ ನಗರೋತ್ಥಾನ ನಿಧಿಯನ್ನು ಸಮರ್ಪಕವಾಗಿ ಬಳಸಲು ವಿಫಲವಾಗಿರುತ್ತದೆ ಎಂದು ತಿಳಿಸಿದರು.
ಆದ್ದರಿಂದ ಕಾಪು ಪುರಸಭೆ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳಿಗೆ ಪರ್ಯಾಯವಾಗಿ ಎಸ್ಡಿಪಿಐ ಪಕ್ಷವನ್ನು ಗೆಲ್ಲಿಸಿ ಜನತೆಯ ಸೇವೆ ಮಾಡಲು ಒಂದು ಅವಕಾಶ ಮಾಡಿ ಕೊಡಬೇಕೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಅಡ್ವೋಕೇಟ್ ಅಬ್ದುಲ್ ಮಜೀದ್ ಖಾನ್, ಉಡುಪಿ ಜಿಲ್ಲಾಧ್ಯಕ್ಷರಾದ ನಝೀರ್ ಚಿಯರ್ಸ್, ಸಾದಿಕ್ ಎಂ.ಪಿ ಮತ್ತು ಇತರರು ಉಪಸ್ಥಿತರಿದ್ದರು..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.