ಮಂಗಳೂರು ,(ವಿಶ್ವ ಕನ್ನಡಿಗ ನ್ಯೂಸ್ ): ಶುಭಾ ಪೂಂಜ ಸರಳವಾಗಿ ಇಂದು ಮದುವೆ ಮಾಡಿಕೊಂಡಿದ್ದಾರೆ . ತಮ್ಮ ದೀರ್ಘಕಾಲದ ಗೆಳೆಯ ಸುಮಂತ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಕುಟುಂಬದವರು ಹಾಗು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಿತು.ಮದುವೆಯಾಗಿರುವ ಬಗ್ಗೆ ಸ್ವತಃ ನಟಿ ಶುಭ ಪೂಂಜಾ ಪೋಸ್ಟ್ವೊಂದನ್ನು ಮಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ . “ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು. ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ’’ ಎಂದು ಬರೆದುಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.